ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಮತ್ತೆ ತೆಲುಗು ಸಿನಿಮಾಗೆ ಎಂಟ್ರಿ ಕೊಡುತ್ತಿದ್ದಾರೆ. ವರುಣ್ ತೇಜ್ ನಾಯಕರಾಗಿರುವ ಸಿನಿಮಾದಲ್ಲಿ ಉಪೇಂದ್ರ ಅತಿಥಿ ಪಾತ್ರ ಮಾಡಲಿದ್ದಾರೆ.
ಈ ಸಿನಿಮಾದಲ್ಲಿ ಉಪೇಂದ್ರ ಬಾಕ್ಸರ್ ಆಗಿ ಕಾಣಿಸಿಕೊಳ್ಳಲಿದ್ದಾರಂತೆ. ಫೆಬ್ರವರಿ ಎರಡನೇ ವಾರದಲ್ಲಿ ಶೂಟಿಂಗ್ ನಡೆಯಲಿದೆ. ಉಪೇಂದ್ರಗೆ ತೆಲುಗು ಸಿನಿಮಾ ರಂಗ ಹೊಸದೇನಲ್ಲ. ಅಲ್ಲೂ ಅವರಿಗೆ ಸಾಕಷ್ಟು ಅಭಿಮಾನಿಗಳಿದ್ದಾರೆ. ಅವರ ಪ್ಯಾನ್ ಇಂಡಿಯಾ ಸಿನಿಮಾ ಕಬ್ಜ ಕೂಡಾ ತೆಲುಗಿನಲ್ಲಿ ರಿಲೀಸ್ ಆಗುತ್ತಿದೆ.