ಇಂದು ಮೈಸೂರಿನಲ್ಲಿ ವಸಿಷ್ಠ ಸಿಂಹ, ಹರಿಪ್ರಿಯಾ ಮದುವೆ

ಗುರುವಾರ, 26 ಜನವರಿ 2023 (07:20 IST)
Photo Courtesy: Twitter
ಮೈಸೂರು: ಸ್ಯಾಂಡಲ್ ವುಡ್ ನ ಜನಪ್ರಿಯ ನಟ ವಸಿಷ್ಠ ಸಿಂಹ, ನಟಿ ಹರಿಪ್ರಿಯಾ ಇಂದು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.

ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಸಾಂಪ್ರದಾಯಿಕವಾಗಿ ಆಪ್ತರ ಸಮ್ಮುಖದಲ್ಲಿ ಈ ಜೋಡಿ ವಿವಾಹವಾಗಲಿದೆ. ಇದಾದ ಬಳಿಕ ಜನವರಿ 29 ರಂದು ಸ್ಯಾಂಡಲ್ ವುಡ್ ಸ್ನೇಹಿತರಿಗಾಗಿ ಬೆಂಗಳೂರಿನಲ್ಲಿ ಆರತಕ್ಷತೆ ಆಯೋಜಿಸಿದ್ದಾರೆ.

ವಸಿಷ್ಠ ಸಿಂಹ, ಹರಿಪ್ರಿಯಾ ಕಳೆದ ಕೆಲವು ವರ್ಷಗಳಿಂದ ಪ್ರೀತಿಸುತ್ತಿದ್ದರೂ ಹೊರಗೆ ಎಲ್ಲೂ ಬಾಯ್ಬಿಟ್ಟಿರಲಿಲ್ಲ. ಕಳೆದ ಡಿಸೆಂಬರ್ ನಲ್ಲಿ ಇಬ್ಬರೂ ನಿಶ್ಚಿತಾರ್ಥ ಮಾಡಿಕೊಂಡಾಗ ಪ್ರೀತಿ ವಿಚಾರ ಬಹಿರಂಗವಾಗಿತ್ತು. ಇದೀಗ ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ