ಹಿರಿಯ ನಟ ರಾಜೇಶ್ ಆರೋಗ್ಯ ಸ್ಥಿತಿ ಹೇಗಿದೆ?

ಸೋಮವಾರ, 14 ಫೆಬ್ರವರಿ 2022 (16:40 IST)
ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟ ರಾಜೇಶ್ ಆರೋಗ್ಯದ ಬಗ್ಗೆ ವೈದ್ಯರು ಮಾಧ‍್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ರಾಜೇಶ್ ಆರೋಗ್ಯದ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ವೈದ್ಯರು ಮಾಹಿತಿ ನೀಡಿದ್ದಾರೆ. ಉಸಿರಾಟದ ಸಮಸ್ಯೆಯಿಂದಾಗಿ ರಾಜೇಶ್ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಅವರಿಗೆ ದೇಹದಲ್ಲಿ ಇನ್ ಫೆಕ್ಷನ್ ಇದೆ. ಅದಕ್ಕಾಗಿ ಐಸಿಯುವಿನಲ್ಲಿಟ್ಟು ಚಿಕಿತ್ಸೆ ನೀಡುತ್ತಿದ್ದೇವೆ.

ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಚೇತರಿಸಿಕೊಳ್ಳುತ್ತಾರೆ ಎನ್ನುವ ವಿಶ್ವಾಸವಿದೆ. ನಮ್ಮ ಕೈಲಾದ ಪ್ರಯತ್ನ ಮಾಡುತ್ತಿದ್ದೇವೆ ಎಂದು ವೈದ್ಯರು ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ