ಹಿರಿಯ ನಟಿ ಲೀಲಾವತಿಗೆ ಅನಾರೋಗ್ಯ
ಲೀಲಾವತಿ ತಮ್ಮ ನೆಲಮಂಗಲದ ತೋಟದ ಮನೆಯಲ್ಲಿಯೇ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ವಯೋ ಸಹಜ ಖಾಯಿಲೆಯಿಂದಾಗಿ ಅವರು ಹಾಸಿಗೆ ಹಿಡಿದಿದ್ದಾರೆ.
ಅವರಿಗೆ ಅನಾರೋಗ್ಯವೆಂಬ ಸುದ್ದಿ ತಿಳಿಯುತ್ತಿದ್ದಂತೇ ವಾಣಿಜ್ಯ ಮಂಡಳಿ ಸದಸ್ಯರು ಮನೆಗೆ ಭೇಟಿ ನೀಡಿ ಯೋಗ ಕ್ಷೇಮ ವಿಚಾರಿಸಿದ್ದಾರೆ.