ನಿರ್ದೇಶಕ ರಾಜೇಂದ್ರ ಸಿಂಗ್ ಬಾಬುಗೆ ಮಾತೃವಿಯೋಗ

ಬುಧವಾರ, 7 ಏಪ್ರಿಲ್ 2021 (09:13 IST)
ಬೆಂಗಳೂರು: ಹಿರಿಯ ನಟಿ, ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ತಾಯಿ ಪ್ರತಿಮಾ ಸಿಂಗ್ ಸೋಮವಾರ ನಿಧನರಾಗಿದ್ದಾರೆ.


ಅವರಿಗೆ 88 ವರ್ಷ ವಯಸ್ಸಾಗಿತ್ತು. ಸಿನಿ ಕುಟುಂಬದಿಂದ ಬಂದಿದ್ದ ಪ್ರತಿಮಾ ಸಿಂಗ್ ಜಗನ್ಮೋಹಿನಿ, ಶ್ರೀನಿವಾಸ ಕಲ್ಯಾಣ ಸೇರಿದಂತೆ ಕೆಲವು ಸಿನಿಮಾಗಳಲ್ಲಿ ನಟಿಸಿ ಜನಪ್ರಿಯರಾಗಿದ್ದರು.

ಅವರಿಗೆ ರಾಜೇಂದ್ರ ಸಿಂಗ್ ಬಾಬು, ಹಿರಿಯ ನಟಿ, ನಿರ್ದೇಶಕಿ ವಿಜಯಲಕ್ಷ್ಮೀ ಸಿಂಗ್, ಸಂಗ್ರಾಮ್ ಸಿಂಗ್ ಸೇರಿದಂತೆ ನಾಲ್ವರು ಮಕ್ಕಳಿದ್ದಾರೆ. ನಿನ್ನೆ ಮೈಸೂರಿನಲ್ಲಿ ಅವರ ಅಂತ್ಯಕ್ರಿಯೆ ನಡೆದಿದೆ. ಅವರ ನಿಧನಕ್ಕೆ ಕರ್ನಾಟಕ ವಾಣಿಜ್ಯ ಮಂಡಳಿ ಸಂತಾಪ ಸೂಚಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ