ಖ್ಯಾತ ನಟ ಮೋಹನ್ ಬಾಬುಗೆ ಕೊಲೆ ಬೆದರಿಕೆ ಹಾಕಿದ ದುಷ್ಕರ್ಮಿಗಳು

ಭಾನುವಾರ, 2 ಆಗಸ್ಟ್ 2020 (11:35 IST)
ಹೈದರಾಬಾದ್ : ತೆಲುಗಿನ ಖ್ಯಾತ ನಟ ಮೋಹನ್ ಬಾಬು ಅವರ ಮನೆಗೆ ದುಷ್ಕರ್ಮಿಗಳ ಗುಂಪೊಂದು ಕೊಲೆ ಬೆದರಿಕೆ ಹಾಕಿದ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.

ಶನಿವಾರ ರಾತ್ರಿ ನಾಲ್ವರು ದುಷ್ಕರ್ಮಿಗಳ ಗುಂಪೊಂದು ಇನ್ನೋವಾ ಕಾರಿನಲ್ಲಿ ಬಂದು ಶಂಶಾಬಾದ್ ವಿಮಾನ ನಿಲ್ದಾಣದ ಬಳಿ ಇರುವ ನಟ ಮೋಹನ್ ಬಾಬು ಅವರ ಮನೆಗೆ ನುಗ್ಗಿ ದಾಳಿ ನಡೆಸಿ ಮೋಹನ್ ಬಾಬು ಅವರಿಗೆ ಕೊಲೆ ಬೆದರಿಕೆ ಹಾಕಿದ್ದಾರೆ.
ಬಳಿಕ ನಟ ಮೋಹನ್ ಬಾಬು ಅವರು ಪೊಲೀಸರಿಗೆ ಮಾಹಿತಿ ನೀಡಿ ದೂರು ದಾಖಲಿಸಿದ್ದಾರೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ