ವಿಜಯ್ ಪತ್ನಿಯರ ಹಲ್ಲೆ ಪ್ರಕರಣ; ಬಂಧನ ಭೀತಿಯಿಂದ ತಲೆಮರೆಸಿಕೊಂಡ ಮೊದಲ ಪತ್ನಿ ನಾಗರತ್ನ

ಸೋಮವಾರ, 29 ಅಕ್ಟೋಬರ್ 2018 (10:37 IST)
ಬೆಂಗಳೂರು : ಸ್ಯಾಂಡಲ್ ವುಡ್ ನಟ ದುನಿಯಾ ವಿಜಯ್ ಅವರ ಎರಡನೇ ಪತ್ನಿ ಕೀರ್ತಿಗೌಡ ಮೇಲೆ ಮೊದಲ ಪತ್ನಿ ನಾಗರತ್ನ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ  ಮೊದಲ ಪತ್ನಿ ನಾಗರತ್ನ ಅವರು ನಾಪತ್ತೆಯಾಗಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.


ಈ ಹಿಂದೆ ದುನಿಯಾ ವಿಜಯ್ ಜೈಲಿನಲ್ಲಿದ್ದ ಸಂದರ್ಭದಲ್ಲಿ ನಾಗರತ್ನ ಅವರು ತನ್ನ ಮೇಲೆ ಕೀರ್ತಿ ಗೌಡ ಹಲ್ಲೆ ಮಾಡಿದ್ದಾಳೆ ಎಂದು ಗಿರಿನಗರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು. ಆದರೆ  ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾನುವಾರ ವಿಜಯ್ ಮನೆಯಲ್ಲಿ ದೊರೆತ  ಸಿಸಿಟಿವಿ ದೃಶ್ಯಾವಳಿಯಲ್ಲಿ ನಾಗರತ್ನ ಅವರೇ ಕೀರ್ತಿಗೌಡ ಮೇಲೆ ಹಲ್ಲೆ ಮಾಡಿರುವುದಾಗಿ ತಿಳಿದುಬಂದಿದೆ. ಈ ಸಂಬಂಧ ಕೀರ್ತಿ ಗೌಡ ಅವರು ನಾಗರತ್ನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.


ಈ ಹಿನ್ನಲೆಯಲ್ಲಿ ಬಂಧನ ಭೀತಿಯಿಂದ ನಾಗರತ್ನ ತಲೆಮರೆಸಿಕೊಂಡಿದ್ದು, ಗಿರಿನಗರ ಪೊಲೀಸರು, ನಾಗರತ್ನ ಪತ್ತೆಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಮಾಹಿತಿ ಪ್ರಕಾರ ನಾಗರತ್ನ ಪರ ವಕೀಲರು ಇಂದು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಲಿದ್ದು, ಅಲ್ಲಿವರೆಗೆ ನಾಗರತ್ನರನ್ನು ಪೊಲೀಸರಿಗೆ ಸಿಗದಂತೆ ಎಚ್ಚರಿಕೆ ವಹಿಸಿದ್ದಾರೆ ಎನ್ನಲಾಗಿದೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ