ಬೆಂಗಳೂರು: ಪತಿ ದರ್ಶನ್ ಅರೆಸ್ಟ್ ಆದ ಬಳಿಕ ಪತ್ನಿ ವಿಜಯಲಕ್ಷ್ಮಿ ಮೊದಲ ಬಾರಿಗೆ ಸೋಷಿಯಲ್ ಮೀಡಿಯಾದಲ್ಲಿ ಹೃದಯ ಚೂರಾಗಿದೆ ಎಂದು ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ.
ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ದರ್ಶನ್ ಸೇರಿದಂತೆ 7 ಆರೋಪಿಗಳ ಜಾಮೀನು ರದ್ದಾಗಿತ್ತು. ಮೊನ್ನೆಯಷ್ಟೇ ಎಲ್ಲಾ ಆರೋಪಿಗಳನ್ನು ಮತ್ತೆ ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ.
ಇದಾದ ಬಳಿಕ ಮೌನಕ್ಕೆ ಶರಣಾಗಿದ್ದ ಪತ್ನಿ ವಿಜಯಲಕ್ಷ್ಮಿ ಇಂದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ದರ್ಶನ್ ಫಾರ್ಮ್ ಹೌಸ್ ನಲ್ಲಿರುವ ಫೋಟೋ ಒಂದನ್ನು ಹಂಚಿಕೊಂಡಿರುವ ವಿಜಯಲಕ್ಷ್ಮಿ ಹೃದಯ ಚೂರಾಗಿದೆ ಎಂದು ಬರೆದುಕೊಂಡಿದ್ದಾರೆ.
ಇದಕ್ಕೆ ಸಾಕಷ್ಟು ಅಭಿಮಾನಿಗಳು ಕಾಮೆಂಟ್ ಮಾಡಿದ್ದು ನಾವು ನಿಮ್ಮೊಂದಿಗಿದ್ದೇವೆ ಎಂದಿದ್ದಾರೆ. ನೀವು ಮತ್ತೆ ಹೋರಾಟ ಮಾಡಿ, ನಿಮ್ಮ ಜೊತೆಗೆ ನಾವಿದ್ದೇವೆ, ಬಾಸ್ ನ ಹೊರಗೆ ಕರೆತನ್ನಿ ಎಂದು ಅಭಿಮಾನಿಗಳು ಮನವಿ ಮಾಡಿದ್ದಾರೆ.