ರವಿಚಂದ್ರನ್ ಪುತ್ರ ವಿಕ್ರಮ್ ಚೊಚ್ಚಲ ಸಿನಿಮಾದ ಟೀಸರ್ ಲಾಂಚ್

ಬುಧವಾರ, 12 ಆಗಸ್ಟ್ 2020 (11:35 IST)
ಬೆಂಗಳೂರು: ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ವಿಕ್ರಮ್ ಅಭಿನಯದ ಚೊಚ್ಚಲ ಸಿನಿಮಾ ‘ತ್ರಿವಿಕ್ರಮ್’ ಟೀಸರ್ ಲಾಂಚ್ ಗೆ ಮುಹೂರ್ತ ಫಿಕ್ಸ್ ಆಗಿದೆ.


ಕ್ರೇಜಿಸ್ಟಾರ್ ದ್ವಿತೀಯ ಪುತ್ರ ವಿಕ್ರಮ್ ಈ ಮೂಲಕ ಸ್ಯಾಂಡಲ್ ವುಡ್ ಗೆ ಪದಾರ್ಪಣೆ ಮಾಡಲಿದ್ದಾರೆ. ಆಗಸ್ಟ್ 16 ರಂದು ಅಧಿಕೃತ ಟೀಸರ್ ಬಿಡುಗಡೆಯಾಗಲಿದೆ.

ಅಂದು ವಿಕ್ರಮ್ ಬರ್ತ್ ಡೇ ಇದ್ದು, ಜನ್ಮದಿನಕ್ಕೆ ಈ ವಿಶೇಷ ಉಡುಗೊರೆ ನೀಡಲಾಗುತ್ತಿದೆ. ಸಹನಾ ಮೂರ್ತಿ ಈ ಸಿನಿಮಾದ ನಿರ್ದೇಶಕರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ