ಕೊರೋನಾ ಇಫೆಕ್ಟ್: ವಿಕ್ರಾಂತ್ ರೋಣ ರಿಲೀಸ್ ಮುಂದೂಡಿಕೆ?
ಇದೀಗ ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ವಿಕ್ರಾಂತ್ ರೋಣ ರಿಲೀಸ್ ಡೇಟ್ ಮುಂದೂಡುವ ಬಗ್ಗೆ ಚಿತ್ರತಂಡ ಚಿಂತನೆ ನಡೆಸಿದೆ ಎನ್ನಲಾಗಿದೆ.
ಫೆಬ್ರವರಿ 24 ಕ್ಕೆ ಚಿತ್ರ ಬಿಡುಗಡೆಗೆ ದಿನಾಂಕ ಫಿಕ್ಸ್ ಆಗಿತ್ತು. ಹೀಗಾಗಿ ಫೆಬ್ರವರಿ 3 ರಂದು ಟೀಸರ್ ಬಿಡುಗಡೆ ಮಾಡಲು ಚಿತ್ರತಂಡ ಯೋಜನೆ ರೂಪಿಸಿತ್ತು. ಆದರೆ ಈಗ ಕೊರೋನಾ ಕಾರಣದಿಂದ ಟೀಸರ್ ಬಿಡುಗಡೆ ರದ್ದು ಮಾಡಲಾಗಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ರಿಲೀಸ್ ದಿನಾಂಕವನ್ನೂ ಮುಂದೂಡಬಹುದು ಎನ್ನಲಾಗಿದೆ.