ವಿಷ್ಣು ಕುಟುಂಬಕ್ಕೆ ಅವಾಚ್ಯ ಶಬ್ದಗಳಿಂದ ನಿಂದನೆ: ಪೊಲೀಸ್ ಠಾಣೆ ಮೆಟ್ಟಿಲೇರಿದ ಅನಿರುದ್ಧ್‌

Sampriya

ಬುಧವಾರ, 17 ಸೆಪ್ಟಂಬರ್ 2025 (19:52 IST)
ಬೆಂಗಳೂರು: ಹಿರಿಯ ನಟ ದಿವಂಗತ ವಿಷ್ಣುವರ್ಧನ್‌ ಅವರ ಕುಟುಂಬಕ್ಕೆ  ಸಾಮಾಜಿಕ ಜಾಲತಾಣಗಳಲ್ಲಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಲಾಗುತ್ತಿದೆ ಎಂದು ಆರೋಪಿಸಿ ವಿಷ್ಣುವರ್ಧನ್‌ ಅಳಿಯ ಅನಿರುದ್ಧ್ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. 

ವಿಷ್ಣುವರ್ಧನ್‌ ಸದಸ್ಯರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಟ್ಟ ಪದಗಳನ್ನು ಬಳಸಿ ನಿಂದನೆ ಮಾಡಲಾಗಿದೆ ಎಂದು ಅನಿರುದ್ಧ್ ಅವರು ತಿಲಕ್‌ನಗರ ಠಾಣೆಗೆ ದೂರು ನೀಡಿದ್ದಾರೆ.

ಅಭಿಮಾನ್‌ ಸ್ಟುಡಿಯೊದಲ್ಲಿದ್ದ ವಿಷ್ಣುವರ್ಧನ್‌ ಅವರ ಸಮಾಧಿಯನ್ನು ತೆರವು ಮಾಡಲಾಗಿದ್ದು, ಈ ವಿಚಾರವಾಗಿ ನಮ್ಮ ಕುಟುಂಬದವರ ಬಗ್ಗೆ ಕೆಟ್ಟದಾಗಿ ಕಮೆಂಟ್‌ ಮಾಡಲಾಗುತ್ತಿದೆ. ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಲಾಗುತ್ತಿದೆ. ಕೆಟ್ಟದಾಗಿ ಕಮೆಂಟ್‌ ಹಾಕಿದವರನ್ನು ಪತ್ತೆ ಮಾಡಿ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಮನವಿ ಮಾಡಿದ್ದಾರೆ.

ನಕಾರಾತ್ಮಕವಾಗಿ ಸಂದೇಶ ಕಳುಹಿಸಿದರೆ ಸುಮ್ಮನಿರುವುದಿಲ್ಲ ಎಂದು ಈ ಹಿಂದೆಯೇ ಎಚ್ಚರಿಸಿದ್ದೆ. ಆದರೂ ಸಾಮಾಜಿಕ ಜಾಲತಾಣಗಳಲ್ಲಿ ಕುಟುಂಬದವರ ವಿರುದ್ಧ ಕೀಳಾಗಿ ಕಮೆಂಟ್ ಮಾಡುತ್ತಿದ್ದು, ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅನಿರುದ್ಧ್‌ ಅವರು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ವಿಡಿಯೊ ಹೇಳಿಕೆಯನ್ನು ಪೋಸ್ಟ್ ಮಾಡಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ