ಬೆಂಗಳೂರು: ಅಭಿಮಾನ್ ಸ್ಟುಡಿಯೋದಲ್ಲಿದ್ದ ನಟ ವಿಷ್ಣುವರ್ಧನ್ ಸ್ಮಾರಕವನ್ನು ನೆಲಸಮ ಮಾಡಿದ ಸಂಬಂಧ ನಟಿ ರಮ್ಯಾ ಅವರು ಇಂದು ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ.
ಕರ್ನಾಟಕದ ಭಾವುಟದಲ್ಲಿನ ವಿಷ್ಣುವರ್ಧನ್ ಪೋಟೋವನ್ನು ಹಂಚಿಕೊಂಡು ಸಾಧಕನಿಗೆ ಸಾವಿಲ್ಲ, ಅಭಿಮಾನಿಗಳ ಹೃದಯವೇ ನಿಮಗೆ ಗುಡಿ ಎಂದು ಅವರು ಬರೆದುಕೊಂಡಿದ್ದಾರೆ.
ವರಮಹಾಲಕ್ಷ್ಮಿ ಹಬ್ಬದಂದೇ ಅಭಿಮಾನ್ ಸ್ಟುಡಿಯೋದಲ್ಲಿದ್ದ ನಟ ವಿಷ್ಣುವರ್ಧನ್ ಸ್ಮಾರಕವನ್ನು ರಾತ್ರೋರಾತ್ರಿ ನೆಲಸಮಗೊಳಿಸಲಾಗಿತ್ತು. ಇದು ವಿಷ್ಣುವರ್ಧನ್ ಅಭಿಮಾನಿಗಳಿಗೆ ಭಾರೀ ಬೇಸರ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ಆಕ್ಟೀವ್ ಆಗಿರುವ ನಟ ರಮ್ಯಾ ಇದೀಗ ವಿಷ್ಣು ಸ್ಮಾರಕ ನೆಲಸಮ ಸಂಬಂಧ ತಮ್ಮ ಅನಿಸಿಕೆಯನ್ನು ಹಂಚಿಕೊಂಡಿದ್ದಾರೆ.