ವಿಷ್ಣುವರ್ಧನ್ ಕುಟುಂಬದ ಬಗ್ಗೆ ಇನ್ನು ಯಾರೇ ಹೀಗೆ ಮಾಡಿದ್ರೂ ಶಿಕ್ಷೆ ಗ್ಯಾರಂಟಿ

Krishnaveni K

ಬುಧವಾರ, 17 ಸೆಪ್ಟಂಬರ್ 2025 (14:51 IST)
ಬೆಂಗಳೂರು: ಇತ್ತೀಚೆಗಿನ ದಿನಗಳಲ್ಲಿ ಸೋಷಿಯಲ್ ಮೀಡಿಯಾಗಳಲ್ಲಿ ಸೆಲೆಬ್ರಿಟಿಗಳ ಬಗ್ಗೆ ಕೆಟ್ಟದಾಗಿ ಕಾಮೆಂಟ್ ಮಾಡುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇದೀಗ ಇದೇ ಕಾರಣಕ್ಕೆ ವಿಷ್ಣುವರ್ಧನ್ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ.

ಅಭಿಮಾನ್ ಸ್ಟುಡಿಯೋದಲ್ಲಿ ಕರ್ನಾಟಕ ರತ್ನ ಡಾ ವಿಷ್ಣುವರ್ಧನ್ ಅವರ ಸಮಾಧಿ ನೆಲಸಮ ಮಾಡಿದ ದಿನದಿಂದ ವಿಷ್ಣುವರ್ಧನ್ ಕುಟುಂಬಸ್ಥರ ಬಗ್ಗೆ ಕೆಲವರು ಸೋಷಿಯಲ್ ಮೀಡಿಯಾದಲ್ಲಿ ನೆಗೆಟಿವ್ ಕಾಮೆಂಟ್ ಮಾಡುತ್ತಿದ್ದಾರೆ. ಇವರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಅಳಿಯ, ನಟ ಅನಿರುದ್ಧ ಜತಕರ ಪೊಲೀಸರಿಗೆ ದೂರು ನೀಡಿದ್ದಾರೆ.

ವಿಷ್ಣು ಸಮಾಧಿ ಒಡೆಯಲು ವಿಷ್ಣು ಕುಟುಂಬದವರೇ ಕಾರಣ ಎಂದೆಲ್ಲಾ ಕೆಲವರು ಸೋಷಿಯಲ್ ಮೀಡಿಯಾದಲ್ಲಿ ಅಪಪ್ರಚಾರ ಮಾಡುತ್ತಿದ್ದಾರೆ. ಇವರ ಬಗ್ಗೆ ಅನಿರುದ್ಧ ಜತಕರ ಪೊಲೀಸರಿಗೆ ದೂರು ನೀಡಿದ್ದಾರೆ. ಇನ್ನು ಮುಂದೆ ಈ ರೀತಿ ಋಣಾತ್ಮಕ ಕಾಮೆಂಟ್ ಮಾಡುವವರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ ಎಂದಿದ್ದಾರೆ.

ಹೀಗಾಗಿ ಮೊದಲೇ ಎಚ್ಚರಿಕೆ ನೀಡುತ್ತಿದ್ದೇವೆ. ನಮ್ಮ ಕುಟುಂಬದವರ ಬಗ್ಗೆ ಕೆಟ್ಟದಾಗಿ ಸೋಷಿಯಲ್ ಮೀಡಿಯಾದಲ್ಲಿ ಕಾಮೆಂಟ್ ಮಾಡಬೇಡಿ. ಇದರಿಂದ ಮುಂದೆ ನಿಮಗೇ ತೊಂದರೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ