ದಳಪತಿ ವಿಜಯ್ ಬಗ್ಗೆ ನಟ ಯಶ್ ಹೇಳಿದ್ದೇನು?

ಮಂಗಳವಾರ, 29 ಡಿಸೆಂಬರ್ 2020 (13:11 IST)
ಬೆಂಗಳೂರು : ಸ್ಯಾಂಡಲ್ ವುಡ್ ಖ್ಯಾತ ನಟ ಯಶ್ ಅವರು ಕಾಲಿವುಡ್ ನ ಖ್ಯಾತ ನಟ ವಿಜಯ್ ಅವರ  ಬಗ್ಗೆ ಮಾತನಾಡಿದ್ದಾರೆ. ವಿಜಯ್ ಅವರನ್ನು ಜನರು ಇಷ್ಟಪಡಲು ಕಾರಣವೇನೆಂಬುದನ್ನು ತಿಳಿಸಿದ್ದಾರೆ ಎನ್ನಲಾಗಿದೆ.

ಯಶ್ ಅಭಿನಯದ ಕೆಜಿಎಫ್ 2 ಮುಂದಿನ ವರ್ಷ ಬಿಡುಗಡೆಯಾಗಲಿದೆ. ಈ ವೇಳೆ ಯಶ್ ಅವರು ಸಂದರ್ಶನವೊಂದರಲ್ಲಿ ನಟ ವಿಜಯ್ ಬಗ್ಗೆ ಮಾತನಾಡಿದ್ದಾರೆ. ವಿಜಯ್ ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಆದರೂ ಅವರು ಯಾವಾಗಲೂ ಸರಳವಾಗಿರುತ್ತಾರೆ. ಜನರು ಅವರನ್ನ ತುಂಬಾ ಇಷ್ಟಪಡುತ್ತಾರೆ. ಇದಕ್ಕೆ ಕಾರಣ ಅವರ ಒಳ್ಳೆತನ ಎಂದು ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ