ಕಾಂತಾರ ಚಾಪ್ಟರ್ 1 ಬುಕಿಂಗ್ ಯಾವಾಗ ಶುರು ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ

Krishnaveni K

ಗುರುವಾರ, 25 ಸೆಪ್ಟಂಬರ್ 2025 (16:53 IST)
ಬೆಂಗಳೂರು: ಬಹುನಿರೀಕ್ಷಿತ ಕಾಂತಾರ ಚಾಪ್ಟರ್ 1 ಸಿನಿಮಾ ನೋಡಲು ಸಿನಿ ರಸಿಕರು ಎದಿರು ನೋಡುತ್ತಿದ್ದಾರೆ. ಇದೀಗ ಟಿಕೆಟ್ ಬುಕಿಂಗ್ ಯಾವಾಗ ಶುರು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ.

ಕಾಂತಾರ ಚಾಪ್ಟರ್ 1 ಸಿನಿಮಾ ಅಕ್ಟೋಬರ್ 2 ರಂದು ವಿಶ್ವದಾದ್ಯಂತ ಬಹುಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಹೊಂಬಾಳೆ ಫಿಲಂಸ್ ನಿರ್ಮಾಣದ, ರಿಷಬ್ ಶೆಟ್ಟಿ ಕತೆ ಬರೆದು, ನಿರ್ದೇಶಿಸಿ, ನಟಿಸಿರುವ ಕಾಂತಾರ ಚಾಪ್ಟರ್ 1 ಟ್ರೈಲರ್ ಈಗಾಗಲೇ ಬಿಡುಗಡೆಯಾಗಿದ್ದು ಚಿತ್ರ ನೋಡುವ ನಿರೀಕ್ಷೆಯೂ ಹೆಚ್ಚಾಗಿದೆ.

ಇಂದಿನಿಂದಲೇ ಸಿನಿಮಾ ಟಿಕೆಟ್ ಬುಕಿಂಗ್ ಆರಂಭವಾಗಲಿದೆ ಎಂದು ಹೊಂಬಾಳೆ ಫಿಲಂಸ್ ಘೋಷಿಸಿದೆ. ಇಂದು ಮಧ್ಯಾಹ್ನ 12.29 ರಿಂದ ಚಿತ್ರದ ಬುಕಿಂಗ್ ಓಪನ್ ಆಗಲಿದೆ. ಬೇಡಿಕೆ ಹೆಚ್ಚಾಗಿರುವುದರಿಂದ ಟಿಕೆಟ್ ದರವೂ ಹೆಚ್ಚಾಗುವ ಸಾಧ್ಯತೆಯಿದೆ.

ವಿಶ್ವದಾದ್ಯಂತ ಬಹುಭಾಷೆಗಳಲ್ಲಿ ಸುಮಾರು 7000 ಕ್ಕೂ ಅಧಿಕ ಪರದೆಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ. ಟಿಕೆಟ್ ಬುಕಿಂಗ್ ನಲ್ಲೂ ಈ ಸಿನಿಮಾ ದಾಖಲೆ ಮಾಡುವುದು ಖಚಿತ ಎನ್ನಲಾಗುತ್ತಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ