ಬೆಂಗಳೂರಿನಲ್ಲಿ ನಡೆಯುವ ನಟಿ ಸನ್ನಿ ಲಿಯೋನ್ ನೃತ್ಯ ಕಾರ್ಯಕ್ರಮಕ್ಕೆ ಯಾಕಿಷ್ಟು ಬಿಗಿ ಭದ್ರತೆ?
ಸೋಮವಾರ, 1 ಅಕ್ಟೋಬರ್ 2018 (08:25 IST)
ಬೆಂಗಳೂರು : ಬೆಂಗಳೂರಲ್ಲಿ ಮಾದಕ ನಟಿ ಸನ್ನಿ ಲಿಯೋನ್ ಅವರು ಖಾಸಗಿ ಕಾರ್ಯಕ್ರಮವೊಂದರಲ್ಲಿ ನೃತ್ಯ ಮಾಡುವುದನ್ನು ಕನ್ನಡ ಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಬಿಗಿ ಭದ್ರತೆ ಏರ್ಪಡಿಸಲು ಬೆಂಗಳೂರು ಪೊಲೀಸ್ ಆಯುಕ್ತರು ನಿರ್ಧರಿಸಿದ್ದಾರೆ.
ಅ.3 ನಾಗವಾರದ ಸಮೀಪವಿರುವ ರೆಸಾರ್ಟ್ ನಲ್ಲಿ ಏರ್ಪಡಿಸಿದ ಖಾಸಗಿ ಕಾರ್ಯಕ್ರಮದಲ್ಲಿವೊಂದರಲ್ಲಿ ನಟಿ ಸನ್ನಿ ಲಿಯೋನ್ ಅವರು ನೃತ್ಯ ಮಾಡಲಿದ್ದಾರೆ. ಆದರೆ ಇದಕ್ಕೆ ಕನ್ನಡ ಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿ, ಅಡ್ಡಿಪಡಿಸುವ ಎಚ್ಚರಿಕೆ ನೀಡಿದೆ.
ಆದ್ದರಿಂದ ಬೆಂಗಳೂರು ಪೊಲೀಸ್ ಆಯುಕ್ತ ಸುನೀಲ್ ಕುಮಾರ್, ಆಯೋಜಕರೊಂದಿಗೆ ಸಭೆ ನಡೆಸಿದ್ದು, ಕಾರ್ಯಕ್ರಮದಲ್ಲಿ ಎಷ್ಟು ಜನ ಭಾಗವಹಿಸಲಿದ್ದಾರೆ ಎನ್ನುವ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಅಲ್ಲದೇ ಇಡೀ ಕಾರ್ಯಕ್ರಮಕ್ಕೆ ಭಾರಿ ಪೊಲೀಸ್ ಭದ್ರತೆ ಒದಗಿಸುವ ಬಗ್ಗೆ ಚರ್ಚಿಸಲಾಗಿದೆ. ಇದರೊಂದಿಗೆ ಕಾರ್ಯಕ್ರಮದಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ