ಸ್ತ್ರೀವೇಷದಲ್ಲಿ ಮನ್ನಣೆ ಗಳಿಸಿದ್ದ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ್ ರಾವ್ ಇನ್ನಿಲ್ಲ

Sampriya

ಶುಕ್ರವಾರ, 5 ಜುಲೈ 2024 (14:58 IST)
Photo Courtesy X
ಪುತ್ತೂರು: ಹೃದಯಾಘಾತದಿಂದ ಖ್ಯಾತ ಹಿರಿಯ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ್ ರಾವ್ ಅವರು ಇಂದು ಬೆಳಗ್ಗೆ ಕೊನೆಯುಸಿರೆಳೆದರು.

ಇಂದು ಬೆಳಿಗ್ಗೆ ಶ್ರೀಧರ್ ರಾವ್ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಅವರನ್ನು ಪುತ್ತೂರಿನ ಮಹಾವೀರ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾದರು.

ಇವರು ಧರ್ಮಸ್ಥಳ ಮೇಳವೊಂದರಲ್ಲಿಯೇ ನಿರಂತರ 50 ವರ್ಷಗಳ ಕಲಾ ಸೇವೆ ಮಾಡಿ ಖ್ಯಾತಿ ಗಳಿಸಿದರು. ಶ್ರೀಧರ್ ರಾವ್ ಅವರು ತೆ೦ಕುತಿಟ್ಟಿನ ಅಪ್ರತಿಮ ಸ್ತ್ರೀವೇಷಧಾರಿಯಾಗಿ ಹೆಚ್ಚು ಮನ್ನಣೆ ಗಳಿಸಿದ್ದು, ಇವರಿಗೆ ದಮಯಂತಿ, ದಾಕ್ಷಾಯಿಣಿ, ಅಮ್ಮು ಬಲ್ಲಾಳ್ತಿ, ಲಕ್ಷ್ಮಿ, ಸುಭದ್ರೆ, ಸತ್ಯಭಾಮೆ ಅಲ್ಲದೆ ಪ್ರಮೀಳೆ, ಶಶಿಪ್ರಭೆ ಮುಂತಾದ ಪಾತ್ರಗಳು ತುಂಬಾನೇ ದೊಡ್ಡ ಹೆಸರು ತಂದುಕೊಟ್ಟಿತು.

ಇವರು ಪತ್ನಿ ಸುಲೋಚನಾ, ಪುತ್ರರಾದ ಬೆಂಗಳೂರಿನಲ್ಲಿ ಪತ್ರಕರ್ತರಾಗಿರುವ ಗಣೇಶ್ ಪ್ರಸಾದ್, ಕೃಷ್ಣಪ್ರಸಾದ್ ಮತ್ತು ದೇವಿಪ್ರಸಾದ್, ಸೊಸೆಯಂದಿರು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ