ಪುನೀತ್ ಸಿನಿಮಾಗೆ ರಾಕಿಂಗ್ ಸ್ಟಾರ್ ಯಶ್ ಪ್ರಚಾರ

ಗುರುವಾರ, 27 ಫೆಬ್ರವರಿ 2020 (09:45 IST)
ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಒಬ್ಬರು ಸ್ಟಾರ್ ನಟರ ಸಿನಿಮಾಗೆ ಇನ್ನೊಬ್ಬರು ಸಾಥ್ ಕೊಡುತ್ತಿರುವುದು ಇತ್ತೀಚೆಗೆ ಕಂಡುಬರುತ್ತಿರುವ ಉತ್ತಮ ಬೆಳವಣಿಗೆ. ಇದೀಗ ಪವರ್ ಸ್ಟಾರ್ ಪುನೀತ್ ನಿರ್ಮಾಣದ ಸಿನಿಮಾಗೆ ರಾಕಿಂಗ್ ಸ್ಟಾರ್ ಯಶ್ ವಿಶೇಷವಾಗಿ ಪ್ರಚಾರ ನಡೆಸಿದ್ದಾರೆ.


ಪುನೀತ್ ನಿರ್ಮಾಣ ಸಂಸ್ಥೆಯಲ್ಲಿ ಮೂಡಿಬರುತ್ತಿರುವ ಮಾಯಾಬಜಾರ್ 2016 ಸಿನಿಮಾ ಇದೇ ಶುಕ್ರವಾರ ತೆರೆ ಕಾಣುತ್ತಿದೆ. ಈ ಹಿನ್ನಲೆಯಲ್ಲಿ ಚಿತ್ರ ನೋಡಿ ಪ್ರೋತ್ಸಾಹಿಸುವಂತೆ ಸ್ವತಃ ಯಶ್ ವಿಡಿಯೋ ಸಂದೇಶ ನೀಡಿದ್ದಾರೆ.

ಪುನೀತ್ ನಿರ್ಮಾಣ ಸಂಸ್ಥೆಯಿಂದ ಒಳ್ಳೊಳ್ಳೆಯ ಸಿನಿಮಾಗಳನ್ನು ಕೊಡುತ್ತಾರೆ. ಅವರೇ ಸ್ವತಃ ಸ್ಟಾರ್ ನಟರಾಗಿ ಹೊಸಬರಿಗೆ ಅವಕಾಶ ನೀಡುತ್ತಿರುವುದು ಅವರ ದೊಡ್ಡ ಗುಣ. ಈ ಚಿತ್ರವನ್ನು ಎಲ್ಲರೂ ನೋಡಿ ಪ್ರೋತ್ಸಾಹಿಸಿ ಎಂದು ಯಶ್ ಶುಭ ಕೋರಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ