ಆರೋಗ್ಯದಲ್ಲಿ ಚೇತರಿಸಿಕೊಳ್ಳತ್ತಿರುವ ಶಿವಣ್ಣರನ್ನು ಭೇಟಿಯಾದ ಯಶ್-ರಾಧಿಕಾ ದಂಪತಿ
ಕೆಲವು ತಿಂಗಳು ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆದು ಶಸ್ತ್ರ ಚಿಕಿತ್ಸೆಗಾಗಿ ಅಮೆರಿಕಗೆ ತೆರಳಿದ್ದರು. ಡಿಸೆಂಬರ್ 24ರಂದು ಶಿವಣ್ಣಗೆ ಶಸ್ತ್ರ ಚಿಕಿತ್ಸೆ ಕೂಡ ಮಾಡಲಾಗಿತ್ತು. ಅದು ಯಶಸ್ವಿಯಾಗಿದೆ. ಸದ್ಯ ಶಿವಣ್ಣ ಇದೀಗ ಸಿನಿಮಾಗಳಿಂದ ಬ್ರೇಕ್ ಪಡೆದು ವಿಶ್ರಾಂತಿ ಪಡೆಯುತ್ತಿದ್ದಾರೆ.
ಇನ್ನೂ ನಿನ್ನೆ ಪುನೀತ್ ರಾಜ್‌ಕುಮಾರ್ ಅವರ 50ನೇ ವರ್ಷದ ಹುಟ್ಟುಹಬ್ಬ ಹಿನ್ನೆಲೆ ಸಮಾಧಿ ಬಳಿ ತೆರಳಿ ಶಿವಣ್ಣ ಪೂಜೆ ಸಲ್ಲಿಸಿದ್ದರು.