ಯಶ್19 ನಿರ್ದೇಶಕ, ಸಂಗೀತ ನಿರ್ದೇಶಕರು ಫಿಕ್ಸ್

ಬುಧವಾರ, 26 ಏಪ್ರಿಲ್ 2023 (06:30 IST)
Photo Courtesy: Twitter
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಮುಂದಿನ ಸಿನಿಮಾ ಬಗ್ಗೆ ಅನೇಕ ಊಹಾಪೋಹಗಳು ಕೇಳಿಬರುತ್ತಲೇ ಇರುತ್ತವೆ. ಇದೀಗ ಅವರ ಮುಂದಿನ ಸಿನಿಮಾ ನಿರ್ದೇಶಕ, ಸಂಗೀತ ನಿರ್ದೇಶಕರ ಬಗ್ಗೆ ಮಾಹಿತಿಯೊಂದು ಹರಿದಾಡುತ್ತಿದೆ.

ಯಶ್ 19 ಯಾವುದು ಎಂದು ಅಧಿಕೃತ ಘೋಷಣೆಗಾಗಿ ಅಭಿಮಾನಿಗಳು ಕಾಯುತ್ತಲೇ ಇರುತ್ತಾರೆ. ಈ ನಡುವೆ ಯಶ್ ಮುಂದಿನ ಸಿನಿಮಾಗೆ ಮಲಯಾಳಂ ನಿರ್ದೇಶಕ ಗೀತು ಮೋಹನ್ ದಾಸ್  ಆಕ್ಷನ್ ಕಟ್ ಹೇಳಲಿದ್ದಾರೆ ಎಂಬ ಸುದ್ದಿ ಬಲವಾಗಿ ಕೇಳಿಬರುತ್ತಿದೆ.

ಈ ಸಿನಿಮಾಗೆ ತೆಲುಗಿನ ಖ್ಯಾತ ಸಂಗೀತ ನಿರ್ದೇಶಕ ದೇವಿ ಶ್ರೀ ಪ್ರಸಾದ್ ಅಲಿಯಾಸ್ ಡಿಎಸ್ ಪಿ ಸಂಗೀತ ಸಂಯೋಜಿಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ