ಗಂಧದ ಗುಡಿ ಪ್ರಿ ರಿಲೀಸ್ ಈವೆಂಟ್ ಆಯೋಜಿಸಲು ಅಶ್ವಿನಿ ಪುನೀತ್ ಗೆ ಬಲವಾಗಿ ನಿಂತ ಯುವ, ವಿನಯ್
ಈ ಕಾರ್ಯಕ್ರಮದ ಸಂಪೂರ್ಣ ಹೊಣೆಯನ್ನು ಸ್ವತಃ ಅಶ್ವಿನಿ ಪುನೀತ್ ರಾಜ್ ಕುಮಾರ್ ವಹಿಸಿಕೊಂಡಿದ್ದಾರೆ. ಗಂಧದ ಗುಡಿ ಪ್ರಿ ರಿಲೀಸ್ ಈವೆಂಟ್ ಗೆ ಗಣ್ಯಾತಿಗಣ್ಯರು ಆಗಮಿಸುತ್ತಿದ್ದಾರೆ. ಬೃಹತ್ ವೇದಿಕೆ ಸಿದ್ಧಪಡಿಸಿ ಅಪ್ಪುಗೆ ಗೌರವ ಸಲ್ಲಿಸಲಾಗುತ್ತಿದೆ.
ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲು ಅಶ್ವಿನಿ ಪುನೀತ್ ಕಳೆದ ಒಂದು ತಿಂಗಳಿನಿಂದ ಓಡಾಡುತ್ತಿದ್ದಾರೆ. ಅವರಿಗೆ ಸಾಥ್ ನೀಡಿರುವುದು ರಾಘವೇಂದ್ರ ರಾಜ್ ಕುಮಾರ್ ಮಕ್ಕಳಾದ ಯುವರಾಜ್ ಕುಮಾರ್ ಮತ್ತು ವಿನಯ್ ರಾಜ್ ಕುಮಾರ್. ಇಡೀ ಕಾರ್ಯಕ್ರಮದ ಉಸ್ತುವಾರಿ ಜೊತೆಗೆ ಅಪ್ಪು ಫುಡ್ ಫೆಸ್ಟಿವಲ್ ನ ಹೊಣೆಯನ್ನೂ ಈ ಇಬ್ಬರು ದೊಡ್ಮನೆ ಕುಡಿಗಳು ನೋಡಿಕೊಳ್ಳುತ್ತಿದ್ದಾರೆ. ಇವರಿಬ್ಬರ ಈ ಕೆಲಸಕ್ಕೆ ಅಪ್ಪು ಅಭಿಮಾನಿಗಳು ಫಿದಾ ಆಗಿದ್ದಾರೆ.