ಕೊನೆಗೂ ಯುವರತ್ನದ ಪಾಠಶಾಲಾ ಹಾಡಿಗೆ ಮುಹೂರ್ತ ಫಿಕ್ಸ್

ಭಾನುವಾರ, 28 ಫೆಬ್ರವರಿ 2021 (09:30 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಯುವರತ್ನ ಸಿನಿಮಾದ ‘ಊರಿಗೊಬ್ಬ ರಾಜ’ ಹಾಡು ಬಿಡುಗಡೆಯಾಗಿ ಭರ್ಜರಿ ರೆಸ್ಪಾನ್ಸ್ ಪಡೆಯುತ್ತಿದೆ. ಅದರ ಬೆನ್ನಲ್ಲೇ ಮತ್ತೊಂದು ಹಾಡು ಬಿಡುಗಡೆಯಾಗುತ್ತಿದೆ.


ಯುವರತ್ನ ಸಿನಿಮಾದ ಪಾಠಶಾಲ ಹಾಡು ಮಾರ್ಚ್ 3 ರಂದು ಹೊಂಬಾಳೆ ಫಿಲಂಸ್ ಯೂ ಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ. ತಾಂತ್ರಿಕ ಕಾರಣದಿಂದ ಈ ಹಾಡಿನ ಬಿಡುಗಡೆ ಮುಂದೂಡಲ್ಪಟ್ಟಿತ್ತು. ಇದೀಗ ಮಾರ್ಚ್ 3 ರಂದು ಮಧ್ಯಾಹ್ನ 3.28 ಕ್ಕೆ ಬಿಡುಗಡೆಯಾಗುತ್ತಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ