ನಟಿಯ ಮೇಲೆ ಅತ್ಯಾಚಾರ ಪ್ರಕರಣ: ಮಾಲಿವುಡ್‌ನ ನಟ ಸಿದ್ದಿಕ್‌ ವಿಚಾರಣೆ

Sampriya

ಸೋಮವಾರ, 7 ಅಕ್ಟೋಬರ್ 2024 (14:17 IST)
Photo Courtesy X
ತಿರುವನಂತಪುರಂ: ನಟಿಯೊಬ್ಬರ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂನ ಹಿರಿಯ ನಟ ಸಿದ್ದಿಕ್‌ ಅವರನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ವಿಚಾರಣೆಗೆ ನಡೆಸಿದೆ.

ಸಿದ್ದಿಕ್‌ ಅವರನ್ನು ನಗರದ ಕಂಟೋನ್ಮೆಂಟ್ ಪೊಲೀಸ್ ಠಾಣೆಯಲ್ಲಿ ಐಪಿಎಸ್ ಅಧಿಕಾರಿ ನೇತೃತ್ವದ ಎಸ್‌ಐಟಿ ತಂಡ ವಿಚಾರಣೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ನಟಿಯೊಬ್ಬರ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಟ ಸಿದ್ದಿಕ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೇರಳ ಹೈಕೋರ್ಟ್ ಇತ್ತೀಚೆಗೆ ವಜಾಗೊಳಿಸಿತ್ತು. ಆದರೆ ಈ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದ ಸಿದ್ದಿಕ್‌ಗೆ ಬಂಧನದಿಂದ ಮಧ್ಯಂತರ ರಕ್ಷಣೆ ಸಿಕ್ಕಿತ್ತು.

2016ರಲ್ಲಿ ಸಿದ್ದಿಕ್ ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ನಟಿಯೊಬ್ಬರು ನೀಡಿರುವ ದೂರನ್ನು ಆಧರಿಸಿ ಮ್ಯೂಸಿಯಂ ಪೊಲೀಸ್ ಠಾಣೆಯಲ್ಲಿ ನಟನ ವಿರುದ್ಧ ಐಪಿಸಿ ಸೆಕ್ಷನ್ 376 (ಅತ್ಯಾಚಾರ) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಮಾಲಿವುಡ್‌ನ ಹಲವು ನಿರ್ದೇಶಕರು ಮತ್ತು ನಟರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಕುರಿತಾದ ನಿವೃತ್ತ ನ್ಯಾಯಮೂರ್ತಿ ಹೇಮಾ ಸಮಿತಿಯ ವರದಿಯು ಬಹಿರಂಗವಾದ ಬಳಿಕ ಚಿತ್ರರಂಗದ ಹಲವಾರು ಹೈ ಪ್ರೊಫೈಲ್‌ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ