ಶಿವಣ್ಣ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ಭೈರತಿ ರಣಗಲ್ ಚಿತ್ರತಂಡ

Sampriya

ಶನಿವಾರ, 5 ಅಕ್ಟೋಬರ್ 2024 (16:02 IST)
Photo Courtesy X
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿಮಾನಿಗಳಿಗೆ ಭೈರತಿ ರಣಗಲ್ ಚಿತ್ರತಂಡದಿಂದ ಸಿಹಿ ಸುದ್ದಿಯೊಂದು ಸಿಕ್ಕಿದೆ. ಹೌದು ಈ ಸಿನಿಮಾದ ಕಾವಲಿಗ ಲಿರಿಕಲ್ ಸಾಂಗ್ ಇದೇ ಅಕ್ಟೋಬರ್ 7ರಂದು ಸಂಜೆ 6.03ಕ್ಕೆ ಬಿಡುಗಡೆ ಆಗಲಿದೆ ಎಂದು ಚಿತ್ರತಂಡ ಹೇಳಿದೆ.

'ಮಾಯದಿರೋ ಮನದ ಗಾಯಕೆ, ಮಮತೆ ಮದ್ದು ಹಚ್ಚೊ ಸೇವಕ' ಸಾಹಿತ್ಯದಲ್ಲಿ ಈ ಹಾಡು ಮೂಡಿ ಬಂದಿದೆ. ಇತ್ತೀಚೆಗಷ್ಟೇ  ಚಿತ್ರದ ಶೀರ್ಷಿಕೆ ಗೀತೆ ಬಿಡುಗಡೆಯಾಗಿತ್ತು.

ಈಗಾಗಲೇ ಬಿಡುಗಡೆಯಾಗಿರುವ ಕಿನ್ನಾಳ್ ರಾಜ್ ಅವರು ಬರೆದಿರುವ 'ಇತಿಹಾಸವೇ ನಿಬ್ಬೆರಿಗಿಸುವ ಎತ್ತಿ ಹಿಡಿಯುವ ಮೈಲಿಗಲ್ಲು' ಶೀರ್ಷಿಕೆ ಗೀತಿಗೆ ಶಿವಣ್ಣ ಅಭಿಮಾನಿಗಳು ಫಿದಾ ಆಗಿದ್ದಾರೆ. ಹೆಸರಾಂತ ಸಂಗೀತ ನಿರ್ದೇಶಕ ರವಿ ಬಸ್ರೂರು ಸಂಗೀತ ನೀಡಿದ್ದಾರೆ. ಸಂತೋಷ್ ವೆಂಕಿ ಹಾಡಿದ್ದಾರೆ.

ಶಿವಣ್ಣ ಅವರ ಬಹುನಿರೀಕ್ಷಿತ ಭೈರತಿ ರಣಗಲ್ ಸಿನಿಮಾ ಬಿಡುಗಡೆಗೆ ಅವರ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಈ ಸಿನಿಮಾದಲ್ಲಿ ಶಿವಣ್ಣಗೆ ಜೋಡಿಯಾಗಿ  ರುಕ್ಮಿಣಿ ವಸಂತ್ ಅಭಿನಯಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ