ಸೋಡಿಂಯಂ ಬ್ಲಾಸ್ಟ್ ಪ್ರಕರಣ: ಮಧುಗಿರಿ ಉಪ ಕಾರಾಗ್ರಹಕ್ಕೆ ಡ್ರೋಣ್ ಪ್ರತಾಪ್ ಶಿಫ್ಟ್‌

Sampriya

ಸೋಮವಾರ, 16 ಡಿಸೆಂಬರ್ 2024 (14:42 IST)
Photo Courtesy X
ತುಮಕೂರು: ಕೃಷಿ ಹೊಂಡದಲ್ಲಿ ಸೋಡಿಯಂ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋಣ್ ಪ್ರತಾಪ್‌ಗೆ ಡಿ.26ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದ್ದು, ಇದೀಗ ಅವರನ್ನು ಮಧುಗಿರಿ ಉಪ ಕಾರಾಗ್ರಹಕ್ಕೆ ಕಳುಹಿಸಲಾಗಿದೆ.

ಡಿ.26ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಪ್ರಧಾನ ಹಿರಿಯ ಸಿವಿಲ್ ಮತ್ತು ಜೆಎಮ್‌ಎಫ್‌ಸಿ ನ್ಯಾಯಾಲಯ ಆದೇಶ ನೀಡಿದೆ. ಮೂರು ದಿನ ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆ ಡ್ರೋನ್ ಪ್ರತಾಪ್‌ನನ್ನು ಮಿಡಿಗೇಶಿ ಪೊಲೀಸರು ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ನ್ಯಾಯಾಲಯಕ್ಕೆ ಕರೆತರುವ ಮುನ್ನ ಮಧುಗಿರಿ ತಾಲೂಕು ಆಸ್ಪತ್ರೆಯಲ್ಲಿ ಡ್ರೋನ್ ಪ್ರತಾಪ್‌ಗೆ ಆರೋಗ್ಯ ತಪಾಸಣೆ ಮಾಡಲಾಗಿತ್ತು. ಕಳೆದ ಶುಕ್ರವಾರ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ ಪೊಲೀಸರು 5 ದಿನ ಕಸ್ಟಡಿಗೆ ಕೇಳಿದ್ದರು. ನ್ಯಾಯಾಲಯ 3 ದಿನ ಕಸ್ಟಡಿಗೆ ಕೊಟ್ಟಿತ್ತು. ಹೀಗಾಗಿ ಇಂದು ಕಸ್ಟಡಿ ಮುಗಿದ ಹಿನ್ನೆಲೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ಉಳಿದಂತೆ ಡ್ರೋನ್ ಪ್ರತಾಪ್‌ಗೆ ಸಹಕರಿಸಿದ ಇನ್ನೂ ಮೂವರ ಮೇಲೂ ಎಫ್ಐಆರ್ ದಾಖಲಾಗಿತ್ತು. ಕ್ಯಾಮೆರಾ ಮ್ಯಾನ್ ವಿನಯ್, ಸೋಡಿಯಂ ಕೊಡಿಸಿದ ಪ್ರಜ್ವಲ್ ಹಾಗೂ ಫಾರಂ ಹೌಸ್ ಮಾಲೀಕ ಜಿತೇಂದ್ರ ಜೈನ್ ಮೇಲೂ ಕೇಸ್ ದಾಖಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ