ಫ್ಯಾನ್ಸ್ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ
ನಟ ದರ್ಶನ್ ನಟನೆಯ ಕಾಟೇರ ಸಿನಿಮಾ ಸೂಪರ್ ಹಿಟ್ ಆಗಿದೆ. ಈ ಚಿತ್ರದಿಂದ ನಟ ತೂಗುದೀಪ ದರ್ಶನ್ ಹಾಗೂ ತರುಣ್ ಸುಧೀರ್ ಅವರು ದೊಡ್ಡ ಯಶಸ್ಸು ಕಂಡಿದ್ದಾರೆ. ಈ ಸಿನಿಮಾಗೆ ಬಂಡವಾಳ ಹೂಡಿದ ರಾಕ್ಲೈನ್ ವೆಂಕಟೇಶ್ ಅವರು ಗೆಲುವು ಕಂಡಿದ್ದಾರೆ. ಈ ಚಿತ್ರದ ಸಕ್ಸಸ್ ಮೀಟ್ ಆಯೋಜನೆ ಮಾಡಲಾಗಿದೆ. ಇದರ ಜೊತೆಗೆ ದರ್ಶನ್ ಅವರು ಅಭಿಮಾನಿಗಳ ಜೊತೆಗೆ ಚಿತ್ರದ ಯಶಸ್ಸನ್ನು ಸಂಭ್ರಮಿಸಲಿದ್ದಾರೆ.
ದರ್ಶನ್ ನಟನೆಯ ಕಾಟೇರ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಬಂಗಾರದ ಬೆಳೆ ತೆಗೆದಿದೆ. ಈ ಚಿತ್ರ ಮೂರೇ ದಿನಕ್ಕೆ 58 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಇದು ತಂಡದ ಖುಷಿ ಹೆಚ್ಚಿಸಿದೆ. ಈ ಖುಷಿಯನ್ನು ಸಂಭ್ರಮಿಸಲು ತಂಡ ಮುಂದಾಗಿದೆ. ಇಂದು ಸಂಜೆ ಏಳು ಗಂಟೆಗೆ ಬೆಂಗಳೂರಿನ ರಾಜಾಜಿನಗರದಲ್ಲಿರುವ ಒರಾಯನ್ ಮಾಲ್ನಲ್ಲಿ ಕಾಟೇರ ಚಿತ್ರ ತಂಡ ಸಾರ್ವಜನಿಕರ ಜೊತೆಗೆ ಚಿತ್ರದ ಯಶಸ್ಸನ್ನು ಸಂಭ್ರಮಿಸಲಿದೆ.