ಪ್ರಿಯಾಂಕ ಉಪೇಂದ್ರ ಅಭಿನಯದ ಮಮ್ಮಿ ಡಿಸೆಂಬರ್ 2 ಕ್ಕೆ ತೆರೆಗೆ

ಬುಧವಾರ, 23 ನವೆಂಬರ್ 2016 (10:03 IST)
ಬೆಂಗಳೂರು: ಪ್ರಿಯಾಂಕ ಉಪೇಂದ್ರ ಮತ್ತು ಯುವಿನಾ ಮುಖ್ಯ ಪಾತ್ರದಲ್ಲಿ ಅಭಿನಯಿಸಿರುವ ಹಾರರ್ ಥ್ರಿಲ್ಲರ್ ಸಿನಿಮಾ ಡಿಸೆಂಬರ್ 2 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.

ಲೋಹಿತ್ ಎಚ್. ನಿರ್ದೇಶನದ ಚಿತ್ರಕ್ಕೆ ಅಜನೀಶ್ ಬಿ ಲೋಕನಾಥ್ ಸಂಗೀತವಿದೆ. ಹಾಲಿವುಡ್ ಸಿನಿಮಾ ಮಾದರಿಯಲ್ಲಿ ಶ್ರೀಮಂತವಾಗಿ ದೃಶ್ಯಗಳನ್ನು ಸೆರೆ ಹಿಡಿಯಲಾಗಿದೆ. ಹಿನ್ನಲೆ ಸಂಗೀತವೂ ಕೂಡಾ ಚಿತ್ರ ಮೂಡ್ ಗೆ ತಕ್ಕಂತಿದೆ. ಇದರ ಟ್ರೇಲರ್ ಗಳು ಈಗಾಗಲೇ ಸೂಪರ್ ಹಿಟ್ ಆಗಿದೆ.

ಪ್ರಿಯಾಂಕ ಮಗಳ ಪಾತ್ರದಲ್ಲಿ ಯುವಿನಾ ನಟಿಸಿದ್ದು, ಆಕೆ ಈಗಾಗಲೇ ರಮೇಶ್ ಅರವಿಂದ್ ಅಭಿನಯದ ಪುಷ್ಪಕ ವಿಮಾನ ಸಿನಿಮಾದಲ್ಲಿ ನಟಿಸಿ ಮೆಚ್ಚುಗೆಗೆ ಪಾತ್ರವಾಗಿದ್ದಾಳೆ. ಪ್ರಿಯಾಂಕ ಉಪೇಂದ್ರಗೂ ಇದೊಂದು ವಿಭಿನ್ನ ಪಾತ್ರ. ಹೀಗಾಗಿ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆಗಳಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ