ಆದಾಯ ಮೀರಿ ಆಸ್ತಿ: ಈಶ್ವರಪ್ಪ ವಿರುದ್ಧ ಸಿಬಿಐ ತನಿಖೆಗೆ ಆದೇಶ

ಮಂಗಳವಾರ, 25 ಮಾರ್ಚ್ 2014 (15:37 IST)
PR
PR
ಬೆಂಗಳೂರು: ಈಶ್ವರಪ್ಪ ಕೊರಳಿಗೆ ಮತ್ತೊಂದು ಕಂಟಕ ಎದುರಾಗಿದೆ. ಆದಾಯ ಮೀರಿ ಆಸ್ತಿ ಗಳಿಸಿರುವ ಆರೋಪದ ಮೇಲೆ ವಕೀಲ ವಿನೋದ್ ಕೇಸ್ ದಾಖಲು ಮಾಡಿದ್ದರು. ಈ ಹಿನ್ನಲೆಯಲ್ಲಿ ಸಿಬಿಐ ತನಿಖೆಗೆ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ನೀಡಿದ್ದಾರೆ. ಮಾರ್ಚ್ 19ರಂದು ತನಿಖೆಗೆ ನಿರ್ದೇಶನ ನೀಡಲಾಗಿದೆ. ಈ ನಡುವೆ ಈಶ್ವರಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ಮಾಡಿದರು. ನೀವು ಟೀಕೆ ಮಾಡಿ,ನಾವೂ ಟೀಕೆ ಮಾಡ್ತೀವಿ, ಆದರೆ ನಾಲಗೆ ಬಿಗಿ ಹಿಡಿದು ಮಾತನಾಡುವುದು ಒಳ್ಳೆಯದು.

ಗೋಧ್ರಾ ಹತ್ಯಾಕಾಂಡದಲ್ಲಿ ಮೋದಿ ಪಾತ್ರವಿಲ್ಲ ಎಂದು ಈಗಾಗಲೇ ಸಾಬೀತಾಗಿದ್ದು, ಕೋರ್ಟ್ ತೀರ್ಪು ಕೊಟ್ಟಿದೆ. ಆದ್ರೂ ಸಿದ್ದರಾಮಯ್ಯ ಮನಬಂದಂತೆ ಟೀಕೆ ಮಾಡುತ್ತಿದ್ದಾರೆ. ಬೇಳೂರು ಗೋಪಾಲಕೃಷ್ಣ ಅವರನ್ನು ಪಕ್ಷಕ್ಕೆ ಸ್ವಾಗತಿಸುತ್ತಾ ಈಶ್ವರಪ್ಪ ಮಾತನಾಡುತ್ತಿದ್ದರು. ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಮಾಧ್ಯಮ ಸಂವಾದದಲ್ಲಿ ಮಾತನಾಡುತ್ತಾ, ಹರಹರ ಮೋದಿಯಲ್ಲಿ, ನರಹರ ಮೋದಿ, ನರಹಂತಕ ಮೋದಿ ಎಂದು ಆಪಾದಿಸಿದ್ದರು.

ವೆಬ್ದುನಿಯಾವನ್ನು ಓದಿ