ಕೊರೊನಾ ಬಗ್ಗೆ ಸುಳ್ಳು ಸುದ್ದಿ ಹರಡಿದರೆ ಜೈಲೇ ಗತಿ

ಶುಕ್ರವಾರ, 20 ಮಾರ್ಚ್ 2020 (19:57 IST)
ಕೋವಿಡ್-19 ಸೋಂಕಿನ ಬಗ್ಗೆ ತಪ್ಪು ಮಾಹಿತಿ ನೀಡಿ ಜನರಲ್ಲಿ ಭಯದ ವಾತವರಣವನ್ನು ಸೃಷ್ಟಿಸಿ ಹಾಗೂ  ಜಿಲ್ಲಾಡಳಿತ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಅಪಪ್ರಚಾರ ಮಾಡುತ್ತಿರುವವರು ಕಂಡುಬಂದಲ್ಲಿ ಅಂಥವರ ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುತ್ತದೆ.  

ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರದ ಆದೇಶದಂತೆ ರಾಮನಗರ  ಜಿಲ್ಲಾಡಳಿತವು ಈಗಾಗಲೇ ಹಲವಾರು ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡು, ಸಾರ್ವಜನಿಕರಿಗೆ ಶಚಿತ್ವ ಮತ್ತು ಇನ್ನಿತರೆ ಕ್ರಮಗಳ ಕುರಿತು ಅರಿವು ಮೂಡಿಸಿ, ಜಿಲ್ಲೆಯಾದ್ಯಂತ ಸೋಂಕು ಹರಡದಂತೆ ಎಲ್ಲಾ ರೀತಿಯ ಕ್ರಮಕೈಗೊಂಡಿರುತ್ತದೆ.

ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಡಳಿತವು ತೆಗೆದುಕೊಂಡಿರುವ ಮುನ್ನೆಚ್ಚರಿಕಾ ಕ್ರಮಗಳಿಗೆ ಬೆಂಬಲ ನೀಡಿ, ಸಾರ್ವಜನಿಕರು ಕೈಜೋಡಿಸಬೇಕಾಗಿದ್ದು, ಆದರೆ ಜಿಲ್ಲಾಡಳಿತದ ವಿರುದ್ಧ ಸಾಮಾಜಿಕ ಜಾಲತಾಣ, ಮಾಧ್ಯಮಗಳ ಮುಖಾಂತರ ಕೋವಿಡ್-19 ಸೋಂಕಿನ ಬಗ್ಗೆ ತಪ್ಪು ಮಾಹಿತಿ ನೀಡಿ ಜನರಲ್ಲಿ ಭಯದ ವಾತವರಣವನ್ನು ಸೃಷ್ಟಿಸಿ ಹಾಗೂ  ಜಿಲ್ಲಾಡಳಿತ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಅಪಪ್ರಚಾರ ಮಾಡುತ್ತಿರುವವರು ಕಂಡುಬಂದಲ್ಲಿ ಅವರ ವಿರುದ್ಧ ಭಾರತೀಯ ದಂಡ ಸಂಹಿತೆ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಎಂ.ಎಸ್ ಅರ್ಚನಾ ತಿಳಿಸಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ