ಬೌದ್ಧ ಧರ್ಮ-ಅನಾವಶ್ಯಕ ವಿವಾದ: ಪೇಜಾವರ ಶ್ರೀ

ಶನಿವಾರ, 15 ನವೆಂಬರ್ 2008 (13:50 IST)
ದಲಿತರು ಹಿಂದೂ ಧರ್ಮದಿಂದ ಬೌದ್ಧ ಧರ್ಮಕ್ಕೆ ಧರ್ಮಾಂತರಗೊಳ್ಳುವ ಕುರಿತಾಗಿ ತಮ್ಮ ಅನಿಸಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡು ವಿವಾದ ಸೃಷ್ಟಿಸಲಾಗಿದೆ ಎಂದು ಪೇಜಾವರ ಮಠದ ವಿಶ್ವೇಶ್ವರತೀರ್ಥ ಸ್ವಾಮಿಜಿ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವ್ಯಕ್ತಿ ಸ್ವಯಂ ಇಚ್ಛೆಯಿಂದ ಯಾವುದೇ ಧರ್ಮ ಸ್ವೀಕಾರಕ್ಕೆ ಸಂವಿಧಾನ ಅವಕಾಶ ಕಲ್ಪಿಸಿರುವಾಗ ಒಂದು ಧರ್ಮದ ವಿರುದ್ಧ ತಾವು ಹೇಗೆ ಹೇಳಿಕೆ ನೀಡಲು ಸಾಧ್ಯ ಎಂದು ಸ್ಪಷ್ಟಪಡಿಸಿದ್ದಾರೆ.

ಹಿಂದೂ ಧರ್ಮ ತೊರೆದು ಬೌದ್ಧ ಧರ್ಮ ಸೇರಬೇಡಿ ಎಂಬುದು ತಮ್ಮ ಅಭಿಪ್ರಾಯವಾಗಿತ್ತೇ ವಿನಃ ಅದು ಆದೇಶವಾಗಿರಲಿಲ್ಲ ಎಂದು ಅವರು ವಿವರಿಸಿದರು.

ಭಯೋತ್ಪಾದನೆ ಕೃತ್ಯಗಳಲ್ಲಿ ಕೆಲ ಮಠಾಧೀಶರು ಭಾಗಿಯಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಈ ಪ್ರಕರಣ ವಿಚಾರಣೆಯಲ್ಲಿದೆ. ಅದರ ಕುರಿತು ಪ್ರತಿಕ್ರಿಯಿಸಲು ಇಷ್ಟಪಡುವುದಿಲ್ಲ ಎಂದು ಹೇಳಿದರು.

ವೆಬ್ದುನಿಯಾವನ್ನು ಓದಿ