‘ಐಟಿ ರೇಡ್ ಗೂ ಗುಜರಾತ್ ರಾಜಕಾರಣಕ್ಕೂ ಸಂಬಂಧವಿಲ್ಲ’

ಬುಧವಾರ, 2 ಆಗಸ್ಟ್ 2017 (11:39 IST)
ನವದೆಹಲಿ: ಸಚಿವ ಡಿಕೆ ಶಿವಕುಮಾರ್ ಅವರ ನಿವಾಸಗಳ ಮೇಲೆ ಇಂದು ಐಟಿ ಅಧಿಕಾರಿಗಳು ದಾಳಿ ನಡೆಸಿರುವುದು ಗುಜರಾತ್ ಶಾಸಕರ ರೆಸಾರ್ಟ್ ರಾಜಕಾರಣದ ವಿರುದ್ಧ ಬಿಜೆಪಿ ಮಾಡಿರುವ ಪ್ರತೀಕಾರ ಎಂಬ ಕಾಂಗ್ರೆಸ್ ಆರೋಪವನ್ನು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ತಳ್ಳಿ ಹಾಕಿದ್ದಾರೆ.

 
‘ಕರ್ನಾಟಕದಲ್ಲಿ ನಡೆದ ಐಟಿ ದಾಳಿಗೂ, ಬೆಂಗಳೂರಿನಲ್ಲಿರುವ ಗುಜರಾತ್ ಶಾಸಕರಿಗೂ ಸಂಬಂಧವಿಲ್ಲ. ಐಟಿ ದಾಳಿ ನಡೆದಿರುವುದರ ಹಿಂದೆ ಬಿಜೆಪಿಯ ಯಾವುದೇ ದುರುದ್ದೇಶವಿಲ್ಲ’ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ರಾಜ್ಯಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಆದರೆ ಅರುಣ್ ಜೇಟ್ಲಿ ಹೇಳಿಕೆಗೆ ಕಾಂಗ್ರೆಸ್ ತೀವ್ರ ಆಕ್ಷೇಪವ್ಯಕ್ತಪಡಿಸಿತು. ಐಟಿ ದಾಳಿ ರಾಜ್ಯ ಸಭೆಯಲ್ಲಿ ಗದ್ದಲಕ್ಕೆ ಕಾರಣವಾಗಿದ್ದು, ಕಾಂಗ್ರೆಸ್ ಸದಸ್ಯರು ಕೇಂದ್ರದ ವಿರುದ್ಧ ಘೋಷಣೆ ಕೂಗಿದರು. ಇದೆಲ್ಲಾ ರಾಜಕೀಯ ಉದ್ದೇಶದಿಂದ ನಡೆದ ದಾಳಿ ಎಂದು ಕಾಂಗ್ರೆಸ್ ಶಾಸಕರು ಸಂಸತ್ತಿನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ..  ಐಟಿ ರೇಡ್: ಸಿಎಂ ಸಿದ್ದರಾಮಯ್ಯಗೆ ಕರೆ ಮಾಡಿದ ರಾಹುಲ್ ಗಾಂಧಿ ಹೇಳಿದ್ದೇನು ಗೊತ್ತಾ?

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ