ಆಗಸ್ಟ್ 29 ರಾಜ್ಯಸಭೆಗೆ ಉಪಚುನಾವಣೆ ನಿಗದಿ

ಬುಧವಾರ, 31 ಜುಲೈ 2013 (08:54 IST)
PTI
ರಾಜ್ಯಸಭೆಯಲ್ಲಿ ಖಾಲಿಯಿರುವ ಒಂದು ಸ್ಥಾನಕ್ಕೆ ಆಗಸ್ಟ್ 29 ರಂದು ಉಪ ಚುನಾವಣೆ ನಡೆಯಲಿದೆ ಎಂದು ಚುನಾವಣೆ ಆಯೋಗದ ಮೂಲಗಳು ತಿಳಿಸಿವೆ.

ಕಾಂಗ್ರೆಸ್ ಪಕ್ಷದ ಮುಖಂಡ ಅನಿಲ್ ಲಾಡ್ ಅವರ ರಾಜ್ಯಸಭೆ ಸದಸ್ಯತ್ವ 2014ರ ಜೂನ್ 25ಕ್ಕೆ ಅಂತ್ಯಗೊಳ್ಳಬೇಕಾಗಿತ್ತು. ಆದರೆ, ಲಾಡ್ ರಾಜೀನಾಮೆ ನೀಡಿದ್ದರಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದೆ.

ಮುಂಬರುವ ಆಗಸ್ಟ್ 12 ರಂದು ಚುನಾವಣೆ ಅಧಿಸೂಚನೆ ಜಾರಿಯಾಗಲಿದ್ದು, ಆಗಸ್ಟ್ 29 ಕ್ಕೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಮರುದಿನ ನಾಮಪತ್ರ ಪರಿಶೀಲನೆ ಆರಂಭವಾಗಲಿದೆ. ಆಗಸ್ಟ್ 29 ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣೆ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.

ಮಾಜಿ ಬಿಜೆಪಿ ಶಾಸಕರಾಗಿದ್ದ ಅನಿಲ್ ಲಾಡ್ ಬಳ್ಳಾರಿಯಲ್ಲಿ ಗಣಿಗಾರಿಕೆ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದರು. 2008ರಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು.

ವೆಬ್ದುನಿಯಾವನ್ನು ಓದಿ