ಕಳೆದ ವರ್ಷ ಭಾರೀ ಮಳೆಯಿಂದಾಗಿ ಅಕ್ಕಿ ಉತ್ಪಾದನೆ ಕಡಿಮೆಯಾಗಿದೆ. ಇದರ ಜೊತೆಗೆ ಈ ವರ್ಷ ಮುಂಗಾರು ಮಳೆ ವಿಳಂಬ ಮತ್ತು ಭತ್ತದ ಕನಿಷ್ಠ ಬೆಂಬಲ ಬೆಲೆಯಲ್ಲಿ ಸಾಮಾನ್ಯ ಏರಿಕೆಯು ಅಕ್ಕಿ ಬೆಲೆಯಲ್ಲಿ ಹೆಚ್ಚಳಕ್ಕೆ ಕಾರಣವಾಗಿದೆ. ಇನ್ನು ಆಂಧ್ರ, ತೆಲಂಗಾಣದಿಂದ ಆಮದು ಆಗುತ್ತಿದ್ದ ಅಕ್ಕಿ ಪೂರೈಕೆಯಲ್ಲೂ ಕುಂಠಿತವಾಗಿದ್ದು, ಅಕ್ಕಿ ಬೇಡಿಕೆ ಇನ್ನಷ್ಟು ಬೇಡಿಕೆ ಹೆಚ್ಚಳವಾಗುವ ಸಾಧ್ಯತೆ ಇದೆ.