ಉತ್ತರ ಕರ್ನಾಟಕ ಬಂದ್ ಬಹುತೇಕ ಯಶಸ್ವಿ.

ಗುರುವಾರ, 15 ಆಗಸ್ಟ್ 2013 (10:43 IST)
PR
WD
ಉತ್ತರ ಕರ್ನಾಟಕದಲ್ಲಿನ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ನೀಡುವಂಥ ಕಳಸಾ- ಬಂಡೂರಿ ಯೋಜನೆಯನ್ನು ತಕ್ಷಣದಲ್ಲಿಯೇ ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿ ಬುಧವಾರ ಉತ್ತರ ಕರ್ನಾಟಕದ ಎಂಟು ತಾಲ್ಲೂಕುಗಳಲ್ಲಿ ಬಂದ್ ನಡೆಸಲಾಯಿತು. ಬಂದ್‌ ಪ್ರಯುಕ್ತ ಅಂಗಡಿ-ಮುಂಗಟ್ಟುಗಳನ್ನು ಮುಚ್ಚಲಾಗಿದ್ದು, ಬಸ್ ಸಂಚಾರ ಸ್ಥಗಿತಗೊಂಡಿತ್ತು.


ಕಳಸಾ-ಬಂಡೂರಿ ಹೋರಾಟ ಸಮಿತಿ ಕರೆ ನೀಡಿದ್ದ ಈ ಬಂದ್ ಗೆ ಉತ್ತರ ಕರ್ನಾಟಕದ ಬಹತೇಕ ತಾಲ್ಲೂಕುಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಬೆಳಗಾವಿ, ಗದಗ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಬಂದ್ ಯಶಸ್ವಿಯಾಗಿದೆ.

ಕಳಸಾ ಬಂಡೀರಿ ಯೋಜನೆಯನ್ನು ಆದಷ್ಟು ಬೇಗ ಅನುಷ್ಟಾನಕ್ಕೆ ತರಬೇಕು ಎಂದು ಒತ್ತಾಯಿಸಿದ ಪ್ರತಿಭಟನಾಕಾರರು ನಗರದ ಜಿಲ್ಲಾಧಿಕಾರಿಯವರಿಗೆ ಮನವಿಯನ್ನು ಸಲ್ಲಿಸಿದರು. ಬಂದ್‌ನಿಂದಗಿ ಯಾವುದೇ ಅಹಿತಕರ ಘಟನೆಗಳು ಸಂಭವಿಸಿಲ್ಲ ಎಂದು ಪೋಲೀಸರು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ