ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನಕ್ಕೆ ಅವಕಾಶವಿಲ್ಲ: ಆಸ್ಕರ್

ಭಾನುವಾರ, 30 ಜೂನ್ 2013 (11:00 IST)
ಅಸಮಾಧಾನ ಯಾವಾಗ ಇರುವುದಿಲ್ಲ ಹೇಳಿ. ಮೊದಲು ಪಕ್ಷದ ಟಿಕೆಟ್‌ ಸಿಗಲಿಲ್ಲ ಎಂದು ಅಸಮಾಧಾನ. ಈಗ ಸಚಿವರನ್ನಾಗಿ ಮಾಡಲಿಲ್ಲ ಎಂದು ಅಸಮಾಧಾನ. ಆದರೆ, ಕಾಂಗ್ರೆಸ್‌ಗೆ ಇಂತಹ ಅಸಮಾಧಾನಗಳನ್ನು ನಿಭಾಯಿಸಿ ಅನುಭವವಿದೆ'

ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ದೊರಯದ ಬಗ್ಗೆ ಕಾಂಗ್ರೆಸ್‌ನಲ್ಲಿ ಉಳಿದುಕೊಂಡಿರುವ ಅಸಮಾಧಾನದ ಬಗ್ಗೆ ಕೇಂದ್ರ ಹೆದ್ದಾರಿ ಖಾತೆ ಸಚಿವ ಆಸ್ಕರ್‌ ಫೆರ್ನಾಂಡಿಸ್‌ ಅವರ ಉವಾಚವಿದು.

ಕಾಂಗ್ರೆಸ್‌ನಲ್ಲಿ ಎಲ್ಲರಿಗೂ ಒಂದಲ್ಲ ಒಂದು ಅವಕಾಶ ದೊರೆಯುತ್ತದೆ. ಹೀಗಾಗಿ ಅಸಮಾಧಾನ ಹೆಚ್ಚು ದಿನ ಉಳಿಯುವುದಿಲ್ಲ ಎಂದು ಅವರೂ ತಿಳಿಸಿದರು.

ಸಚಿವ ಸಂಪುಟದಲ್ಲಿ ಕರಾವಳಿಗೆ ಹೆಚ್ಚಿನ ಪ್ರಾತಿನಿಧ್ಯ ದೊರೆಯುವಲ್ಲಿ ತನ್ನ ಯಾವುದೇ ಪಾತ್ರವಿಲ್ಲ. ಕರಾವಳಿಯ ಜನರು ಕಾಂಗ್ರೆಸ್‌ಗೆ ಹೆಚ್ಚಿನ ಬೆಂಬಲ ನೀಡಿರುವುದರಿಂದ ಸಹಜವಾಗಿಯೇ ಆ ಭಾಗಕ್ಕೆ ಪ್ರಾತಿನಿಧ್ಯ ದೊರಕಿದೆ ಎಂದರು.

ಯಡಿಯೂರಪ್ಪ ಮತ್ತೆ ಬಿಜೆಪಿ ಸೇರುವ ಕುರಿತ ಬೆಳವಣಿಗೆಗೆ ಪ್ರತಿಕ್ರಿಯಿಸಿದ ಅವರು, ಯಾರು ಏನಾದರೂ ಮಾಡಿಕೊಳ್ಳಲಿ. ಕಾಂಗ್ರೆಸ್‌ ತನ್ನ ಗಮನವನ್ನು ಕೆಲಸದ ಮೇಲೆ ಕೇಂದ್ರೀಕರಿಸಿದ್ದು, ಮುಂದಿನ ಚುನಾವಣೆಯಲ್ಲಿ ಖಚಿತವಾಗಿಯೂ ಜನತೆಯ ಆಶೀರ್ವಾದ ಪಡೆಯಲಿದೆ ಎಂದರು.

ವೆಬ್ದುನಿಯಾವನ್ನು ಓದಿ