ಕಾರವಾರ ಬಂದರಿನಲ್ಲಿ ಕೊರೊನಾ : ಡಿಸಿ ಹೇಳಿದ್ದೇನು?

ಮಂಗಳವಾರ, 17 ಮಾರ್ಚ್ 2020 (19:30 IST)
ಕೊರೊನಾ ವೈರಸ್ ಕುರಿತು ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯು ಪ್ರಜ್ಞಾವಂತರ ಜಿಲ್ಲೆಯಾಗಿದ್ದು, ಇಂತಹ ಜಿಲ್ಲೆಯಲ್ಲಿ ಕರೋನಾ ವೈರಸ್ ಕುರಿತು ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವವರ ವಿರುದ್ಧ ನಿರ್ಧಾಕ್ಷಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾಧಿಕಾರಿ ಡಾ.ಹರೀಶ ಕುಮಾರ ಕೆ. ಹೇಳಿದ್ದಾರೆ.

ಜನರಲ್ಲಿ ಅನಗತ್ಯವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಕರೋನಾ ವೈರಸ್ ಬಗ್ಗೆ ಸುಳ್ಳು ವದಂತಿಗಳು ಹರಿದಾಡುತ್ತಿರುವುದು ಕಂಡುಬರುತ್ತಿದೆ. ಈ ಬಗ್ಗೆ ಪೊಲೀಸ್ ಇಲಾಖೆ ಮಾಹಿತಿ ನೀಡಲಾಗಿದ್ದು, ಮುಂದಿನ ಕ್ರಮಗಳಿಗಾಗಿ ಪೊಲೀಸ್ ಇಲಾಖೆಯು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಿದೆ ಎಂದರು.

ಮುಂಡಗೋಡ ತಾಲೂಕಿನ ಟಿಬೇಟಿಯನ್ ಕಾಲೋನಿ ಹಾಗೂ ಕುಮಟಾ ತಾಲೂಕಿನ ಗೋಕರ್ಣದಲ್ಲಿ ಆರೋಗ್ಯ ಇಲಾಖೆಯು ತಂಡ ರಚನೆ ಮಾಡಿ ಮನೆ ಭೇಟಿ ಮಾಡುವ ಮೂಲಕ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ.
ವಿದೇಶದಿಂದ ಬಂದವರ ಅಂಕಿ-ಸಂಖ್ಯೆಗಳನ್ನು ಸಂಗ್ರಹಿಸಿ, ಅಗತ್ಯ ಕ್ರಮಗಳನ್ನು ಕೈಗೊಂಡು ಜಿಲ್ಲಾಡಳಿತವು ಸಕಲ ರೀತಿಯಲ್ಲಿ ಸನ್ನದ್ಧವಾಗಿದೆ ಎಂದರು.

ಕಾರವಾರ ಬಂದರಿನಲ್ಲಿ ಇಲ್ಲಿವರೆಗೆ 112 ಜನರನ್ನು ಸ್ಕ್ರೀನಿಂಗ್ ಟೆಸ್ಟ್ ಮಾಡಲಾಗಿದೆ ಹಾಗೂ ವ್ಯಾಪಾರಕ್ಕಾಗಿ ವಿದೇಶದಿಂದ ಬರುವಂತಹ ಹಡುಗುಗಳಲ್ಲಿರುವ ಜನರಿಗೆ ಅಗತ್ಯ ಮೂಲಸೌಲಭ್ಯಗಳನ್ನು ಹಡುಗಿನಲ್ಲಿಯೇ ಒದಗಿಸಲಾಗುತ್ತದೆ ಎಂದರು.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ