ಜಾಫರ್‌ ಷರೀಫ್ ಕಾಂಗ್ರೆಸ್ ತೊರೆದು ಜೆಡಿಎಸ್‌ಗೆ ಸೇರ್ತಾರಾ?

ಶನಿವಾರ, 15 ಮಾರ್ಚ್ 2014 (15:48 IST)
PR
PR
ಬೆಂಗಳೂರು: ಹಿರಿಯ ಕಾಂಗ್ರೆಸ್ ಮುಖಂಡ ಜಾಫರ್ ಷರೀಫ್ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ತೆರಳಿದ್ದು, ಅವರ ಜತೆ ಮಾತುಕತೆ ನಡೆಸಿದ್ದಾರೆ. ಇದರಿಂದ ಷರೀಫ್ ಕಾಂಗ್ರೆಸ್ ತೊರೆದು ಜೆಡಿಎಸ್‌ಗೆ ಸೇರ್ಪಡೆಯಾಗುತ್ತಾರೆಂಬ ಊಹಾಪೋಹ ಹಬ್ಬಿದೆ. ಷರೀಫ್ ಪ್ರಸಕ್ತ ರಾಜಕೀಯ ವಿದ್ಯಮಾನಗಳನ್ನು ಕುರಿತು ದೇವೇಗೌಡರ ಜತೆ ಚರ್ಚೆ ನಡೆಸಿದ್ದಾರೆ. ಜಾಫರ್ ಷರೀಫ್ ಅವರು ಬೆಂಗಳೂರು ಸೆಂಟ್ರಲ್ ಕ್ಷೇತ್ರದಿಂದ ಟಿಕೆಟ್ ನಿರೀಕ್ಷಿಸಿದ್ದರು. ಆದರೆ ಕೊನೆಗಳಿಗೆಯಲ್ಲಿ ಅವರಿಗೆ ಟಿಕೆಟ್ ಕೈತಪ್ಪಿದ್ದರಿಂದ ಅವರಿಗೆ ಬೇಸರವಾಗಿತ್ತು. ಹಿರಿಯ ಮುಖಂಡರಾದ ತಮ್ಮನ್ನು ಸರಿಯಾಗಿ ನಡೆಸಿಕೊಂಡಿಲ್ಲ ಎಂದು ಷರೀಫ್ ತಮ್ಮ ಅಸಮಾಧಾನ ತೋಡಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಕುಮಾರಸ್ವಾಮಿ ಕೂಡ ಹಾಜರಿದ್ದರು.

ಆದರೆ ಇದರಲ್ಲಿ ರಾಜಕೀಯ ಉದ್ದೇಶವೂ ಇಲ್ಲ, ಆತ್ಮೀಯ ಸಂಬಂಧದ ಹಿನ್ನೆಲೆಯಲ್ಲಿ ಭೇಟಿ ಮಾಡಿದ್ದೇನೆ ಎಂದು ಜಾಫರ್ ಹೇಳಿದ್ದಾರೆ. ನಿನ್ನೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಜಾಫರ್ ಷರೀಫ್ ಪರವಾಗಿ ದೇವೇಗೌಡರು ಹೇಳಿಕೆ ನೀಡಿದ್ದು, ತಮ್ಮ ಪಕ್ಷಕ್ಕೆ ಬರುವುದಾದರೆ ಸ್ವಾಗತಿಸುವುದಾಗಿ ಹೇಳಿಕೆ ನೀಡಿದ್ದರು.

ವೆಬ್ದುನಿಯಾವನ್ನು ಓದಿ