ಜ.16ರೊಳಗೆ ಲೋಕಸಭೆ ಅಭ್ಯರ್ಥಿಗಳ ಪಟ್ಟಿ ಹೈಕಮಾಂಡ್‌ಗೆ: ಜೋಷಿ

ಗುರುವಾರ, 2 ಜನವರಿ 2014 (17:53 IST)
PR
PR
ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಜ.16ರೊಳಗೆ ಅಭ್ಯರ್ಥಿಗಳ ಪಟ್ಟಿ ಹೈಕಮಾಂಡ್‌ಗೆ ತಲುಪಿಸಲು ಬಿಜೆಪಿ ನಿರ್ಧರಿಸಿದೆ. ಬಿಜೆಪಿ ಕೋರ್ ಕಮಿಟಿ ಸಭೆ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ಸುದ್ದಿಗೋಷ್ಠಿಯಲ್ಲಿ ಮೇಲಿನ ವಿಷಯ ತಿಳಿಸಿದರು. ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಮಾತನಾಡುತ್ತಾ, ಟಿಕೆಟ್ ಆಕಾಂಕ್ಷಿಗಳ ಪಟ್ಟಿಯನ್ನು ಹೈಕಮಾಂಡ್‌ಗೆ ರವಾನಿಸುತ್ತೇವೆ ಎಂದು ಜೋಷಿ ಹೇಳಿದರು.

ಕಳಂಕಿತ ಸಚಿವರನ್ನು ಕಾಂಗ್ರೆಸ್ ಸಂಪುಟಕ್ಕೆ ಸೇರ್ಪಡೆ ಮಾಡಿರುವ ಬಗ್ಗೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಅವರು ಹೇಳಿದರು. ಮನೆಮನೆಗೆ ಬಿಜೆಪಿ ಕಾರ್ಯಕ್ರಮವನ್ನು ಜನವರಿ 15ರಿಂದ ಜನವರಿ 30ರವರೆಗೆ ನಡೆಸಲು ನಿರ್ಧರಿಸಿರುವುದಾಗಿಯೂ ಜೋಷಿ ತಿಳಿಸಿದರು.

ವೆಬ್ದುನಿಯಾವನ್ನು ಓದಿ