ಜ.29 ರಿಂದ 75ನೇ ಸಾಹಿತ್ಯ ಸಮ್ಮೇಳನ

ಬುಧವಾರ, 5 ನವೆಂಬರ್ 2008 (17:14 IST)
75ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಚಿತ್ರದುರ್ಗದಲ್ಲಿ ನಡೆಸಲು ಕನ್ನಡ ಸಾಹಿತ್ಯ ಪರಿಷತ್ ನಿರ್ಧರಿಸಿರುವುದಾಗಿ ತಿಳಿಸಿದೆ.

ಈ ಕುರಿತು ನಗರದಲ್ಲಿ ಬುಧವಾರ ಮಾಹಿತಿ ನೀಡಿದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಲ್ಲೂರು ಪ್ರಸಾದ್, 75ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಚಿತ್ರದುರ್ಗದಲ್ಲಿ ನಡೆಸುವುದೆಂದು ತೀರ್ಮಾನಿಸಲಾಗಿದ್ದು, ದಿನಾಂಕವನ್ನು ನಿಗದಿಪಡಿಸಲಾಗಿದೆ ಎಂದಿದ್ದಾರೆ.

ಈ ನಿಟ್ಟಿನಲ್ಲಿ ಮುಂದಿನ ವರ್ಷದ ಜನವರಿ 29 ರಿಂದ ಫೆಬ್ರವರಿ 1ರವರೆಗೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ. 75ರ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅದ್ದೂರಿಯಾಗಿ ನಿರ್ವಹಿಸಲು ನಿರ್ಧರಿಸಿದ್ದು, ಈ ಕುರಿತು ಸಮಿತಿಯೊಂದನ್ನು ರಚಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ವೆಬ್ದುನಿಯಾವನ್ನು ಓದಿ