ನಮ್ಮ ಮೆಟ್ರೋ ರೈಲು ಪ್ರಯಾಣ ದರ ಹೆಚ್ಚಳ ಪ್ರಸ್ತಾಪ ಕೈ ಬಿಡುವಂತೆ ಮುಖ್ಯಮಂತ್ರಿ ಚಂದ್ರು ಒತ್ತಾಯ

Sampriya

ಬುಧವಾರ, 9 ಅಕ್ಟೋಬರ್ 2024 (15:40 IST)
Photo Courtesy X
ಬೆಂಗಳೂರು: ನಮ್ಮ ಮೆಟ್ರೋ ‌ಪ್ರಯಾಣ ದರನ್ನು ಶೇ 15ರಿಂದ 25ರಷ್ಟು ಏರಿಕೆ ಮಾಡುವ ಬಿಎಂಆರ್‌ಸಿಎಲ್‌ ಪ್ರಸ್ತಾವ ಕೈ ಬಿಡಬೇಕೆಂದು  ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಒತ್ತಾಯಿಸಿದ್ದಾರೆ.

ಮೆಟ್ರೋ ಪ್ರಯಾಣ ದರ ಪ್ರಸ್ತಾಪವನ್ನು ಕೈಬಿಡಬೇಕು ಎಂದು ಸಿಎಂ ಅವರಿಗೆ ಪತ್ರ ಬರೆದಿರುವ ಮುಖ್ಯಮಂತ್ರಿ ಚಂದ್ರು, ಈಗಾಗಲೇ ಮೆಟ್ರೋ ಪ್ರಯಾಣ ದರ ದುಬಾರಿಯಾಗಿದ್ದು, ಈಗ ಮತ್ತೆ ಪ್ರಯಾಣ ದರ ಏರಿಕೆ ಮಾಡುವುದರಿಂದ ಜನಸಾಮಾನ್ಯರ ಮೇಲೆ ಹೊರ ಜಾಸ್ತಿಯಾಗುತ್ತದೆ ಎಂದು ಹೇಳಿದ್ದಾರೆ.


ಬಿಎಂಆರ್‌ಸಿಎಲ್ ಈಗಾಗಲೇ ಆರ್ಥಿಕ ಸಂಪನ್ಮೂಲ ವೃದ್ಧಿ ಹಾಗೂ ಲಾಭ ಗಳಿಕೆಯಲ್ಲಿ ಮುಂದಿದೆ. ಈ
ಸಂದರ್ಭದಲ್ಲಿ ಪ್ರಯಾಣಿಕರ ಬಗ್ಗೆ ಕಾಳಜಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ಮರೆತಿರುವುದು ದುರದೃಷ್ಟಕರ ಎಂದು ದೂರಿದರು.

 2023-2024ರ ಆರ್ಥಿಕ ವರ್ಷದಲ್ಲಿ ಬಿಎಂಆರ್‌ಸಿಎಲ್ 129.3 ಕೋಟಿ ರೂ. ಲಾಭ ಗಳಿಸಿದೆ ಎಂದು ಮೆಟ್ರೋ ಮೂಲಗಳು ತಿಳಿಸಿವೆ. ಲಾಭದಾಯಕ ಹಾದಿಗೆ ಬಂದಿದ್ದರೂ ಪ್ರಯಾಣ ದರ ಹೆಚ್ಚಳಕ್ಕೆ ದರ ನಿಗದಿ ಮಾಡಲು ಸಮಿತಿ ರಚಿಸಿರುವುದು ಸರಿಯಲ್ಲ ಎಂದರು.

ಕೂಡಲೇ ಬಿಎಂಆರ್‌ಸಿಎಲ್ ದರ ಏರಿಕೆ ಪ್ರಸ್ತಾಪವನ್ನು ಕೈಬಿಡಬೇಕು. ಸಿಎಂ ಕೂಡಲೇ ಈ ವಿಚಾರವನ್ನು ಗಮನಿಸಿ ದರ ಏರಿಕೆಗೆ ಕಡಿವಾಣ ಹಾಕಬೇಕು. ಬಿಎಂಆರ್‌ಸಿಎಲ್‌ನ ಈ ಜನ ವಿರೋಧಿ ನಡೆಯನ್ನು ಆಮ್ ಆದ್ಮಿ ಪಾರ್ಟಿ ಬಲವಾಗಿ ಖಂಡಿಸುತ್ತದೆ ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ