ಪಶ್ಚಿಮಘಟ್ಟದಲ್ಲಿ ಗಣಿಗಾರಿಕೆಗೆ ಅನುಮತಿ ಇಲ್ಲ: ಸಿಎಂ

ಗುರುವಾರ, 27 ನವೆಂಬರ್ 2008 (11:31 IST)
ರಾಜ್ಯದ ಪಶ್ಚಿಮಘಟ್ಟ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆಗೆ ಅವಕಾಶ ನೀಡದಿರುವ ಅಚಲ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ತಿಂಗಳ ಸಂಪುಟದಲ್ಲಿ ನೂತನ ಗಣಿ ನೀತಿಗೆ ಒಪ್ಪಿಗೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಯಾವುದೇ ಗಣಿಗಾರಿಕೆಗೂ ಅವಕಾಶ ನೀಡಿಲ್ಲ ಎಂದು ತಿಳಿಸಿದ ಅವರು, ಪಶ್ಚಿಮ ಘಟ್ಟವನ್ನು ಕಾಪಾಡುವ ಉದ್ದೇಶದಿಂದ ಅಲ್ಲಿ ಗಣಿಗಾರಿಕೆಗೆ ಅನುಮತಿ ನಿರಾಕರಿಸಲಾಗಿದೆ ಎಂದು ತಿಳಿಸಿದ್ದಾರೆ.

ಪಶ್ಚಿಮಘಟ್ಟದಲ್ಲಿ ಜೀವವೈವಿಧ್ಯ ತಾಣಗಳಿವೆ, ಅಮೂಲ್ಯ ಗಿಡಮೂಲಿಕೆಗಳಿವೆ, ಇವುಗಳನ್ನು ಸಂರಕ್ಷಣೆ ಮಾಡುವುದು ಸರ್ಕಾರದ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಗಣಿಗಾರಿಕೆಗೆ ಅವಕಾಶ ನೀಡುವುದಿಲ್ಲ ಎಂದು ಅವರು ಸ್ಪಷ್ಟವಾಗಿ ತಿಳಿಸಿದರು.

ವೆಬ್ದುನಿಯಾವನ್ನು ಓದಿ