ಪೌಷ್ಟಿಕ ಆಹಾರ ಸೇವನೆ ಅಗತ್ಯ ಎಂದ ಶಾಸಕ

ಬುಧವಾರ, 26 ಸೆಪ್ಟಂಬರ್ 2018 (17:15 IST)
ಮಕ್ಕಳು ಮತ್ತು ಗರ್ಭಿಣಿಯರು ಪೌಷ್ಟಿಕ ಆಹಾರವನ್ನು ಸೇವಿಸುವ ಮೂಲಕ ಆರೋಗ್ಯವಂತ ಜೀವನ ನಡೆಸಬಹುದು ಎಂದು ಶಾಸಕ ಹೇಳಿದ್ದಾರೆ.

ಯಾದಗಿರಿ ಪಟ್ಟಣದ ಗಾಂಧಿ ಮೈದಾನದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಶಿಶು ಅಭಿವೃದ್ದಿ ಇಲಾಖೆ, ಗ್ರಾಮೀಣ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಇತರೆ ಇಲಾಖೆಗಳ ಸಹಯೋಗದಲ್ಲಿ ನಡೆದ ಪೋಷಣ ಅಭಿಯಾನ ಮಾಸಾಚರಣೆ ಜನಾಂದೋಲನ ಕಾರ್ಯಕ್ರಮ ಉದ್ಘಾಟಿಸಿ ಶಾಸಕ ನಾಗನಗೌಡ ಕಂದಕೂರ ಮಾತನಾಡಿದರು.

ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಪೌಷ್ಟಿಕ ಆಹಾರದ ಕೊರತೆಯಿಂದ ಮಕ್ಕಳ ಮತ್ತು ಗರ್ಭೀಣಿಯರ ಮರಣದ ಸಂಖ್ಯೆ ಹೆಚ್ಛಾಗಿತ್ತು. ಸರ್ಕಾರದ ಯೋಜನೆಗಳಿಂದ ಹಾಗೂ ಇಲಾಖೆಗಳ ಉತ್ತಮ ಕಾರ್ಯಕ್ಷಮತೆಯಿಂದಾಗಿ ಅದರ ಪ್ರಮಾಣ ಇಳಿಕೆಯಾಗಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬರೂ ಪೌಷ್ಟಿಕ ಆಹಾರ ಸೇವಿಸುವುದರ ಮೂಲಕ ಆರೋಗ್ಯ ವಂತ ಸಮಾಜವನ್ನು ನಿರ್ಮಿಸಬಹುದು ಎಂದು ತಿಳಿಸಿದರು.

ಸರ್ಕಾರವು ಪೌಷ್ಟಿಕ ಆಹಾರ ಆಹಾರವನ್ನು ನೀಡುವ ಉದ್ದೇಶದಿಂದ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಪ್ರತಿ ಅಂಗನವಾಡಿ ಕೇಂದ್ರಗಳಲ್ಲಿ ಮಾತೃಪೂರ್ಣ ಯೋಜನೆ ಅಡಿಯಲ್ಲಿ ಕಾಳು, ಮೊಳಕೆಯುಕ್ತ ಆಹಾರ, ಹಾಲು, ಆಹಾರ ನೀಡುತ್ತಿದೆ. ಅದಕ್ಕೆ ಸಾವಿರಾರು ರೂಗಳನ್ನು ಖರ್ಚು ಮಾಡುತ್ತಿದ್ದು, ಎಲ್ಲರೂ ಯೋಜನೆಯ ಸದುಪಯೋಗ ಪಡೆಯುವಂತೆ ಸಲಹೆ ನೀಡಿದರು.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ