ಬಿಜೆಪಿ ಬೆಂಬಲಕ್ಕೆ ಜೆಡಿಎಸ್: ಯಡ್ಡಿಗೆ ಸಿಎಂ ಸ್ಥಾನ

ಶನಿವಾರ, 27 ಅಕ್ಟೋಬರ್ 2007 (13:18 IST)
ಹಲವು ದಿನಗಳಿಂದ ರಾಜ್ಯದ ಜನತೆಯಲ್ಲಿ ಕುತೂಹಲ ಕೆರಳಿಸಿದ್ದ ಭಾರತೀಯ ಜನತಾಪಕ್ಷ ಹಾಗೂ ಜಾತ್ಯಾತೀತ ಜನತಾದಳಗಳ ನಡುವಣ ಭಿನ್ನಮತಕ್ಕೆ ತೆರೆ ಎಳೆಯಲು ಉಭಯ ಪಕ್ಷಗಳು ನಿರ್ಧರಿಸಿವೆ ಎಂದು ವಕ್ತಾರ ದತ್ತಾ ಅವರು ತಿಳಿಸಿದ್ದಾರೆ.

ಜಾತ್ಯಾತೀತ ಜನತಾದಳ ಬಿಜೆಪಿಯೊಂದಿಗೆ ಸಮ್ಮಿಶ್ರ ಸರಕಾರ ರಚಿಸಲು ನಿರ್ಧರಿಸಿದೆ ಎಂದು ಜೆಡಿಎಸ್ ವಕ್ತಾರರು ತಿಳಿಸಿದ್ದಾರೆ. ಜೆಡಿಎಸ್ ಮತ್ತು ಬಿಜೆಪಿ ಸಮ್ಮಿಶ್ರ ಸರಕಾರದಲ್ಲಿ ಬಿಜೆಪಿ ನಾಯಕ ಬಿ.ಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನ ಅಲಂಕರಿಸಲಿದ್ದಾರೆಂದು ವಕ್ತಾರ ವೈ. ಎಸ್ .ದತ್ತಾ ತಿಳಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಇಂದು ಸಂಜೆ ನಾಲ್ಕು ಗಂಟೆಗೆ ಬಿಜೆಪಿಯನ್ನು ಬೆಂಬಲಿಸುವ ಪತ್ರವನ್ನು ರಾಜ್ಯಾಪಾಲ ರಾಮೇಶ್ವರ ಠಾಕೂರ್ ಅವರಿಗೆ ರವಾನಿಸಬಹುದು ಎಂದು ವಕ್ತಾರ ದತ್ತಾ ಅವರು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ