ಬಿಬಿಎಂಪಿ ವ್ಯಾಪ್ತಿಯಲ್ಲಿ ನಾಯಿಗಳ ಸಮೀಕ್ಷೆ ನಡೆಸಿರುವ ವರದಿ ಬಿಡುಗಡೆ

ಬುಧವಾರ, 4 ಅಕ್ಟೋಬರ್ 2023 (15:00 IST)
ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೀದಿನಾಯಿಗಳ ಸಮೀಕ್ಷೆ ನಡೆಸಿರುವ ಸಂಬಂಧ ಆರೋಗ್ಯ ಹಾಗೂ ಪಶುಪಾಲನಾ ವಿಭಾಗದ ವಿಶೇಷ ಆಯುಕ್ತರಾದ ಡಾ. ತ್ರಿಲೋಕ್ ಚಂದ್ರರವರು ವರದಿಯನ್ನು ಬಿಡುಗಡೆಗೊಳಿಸಿದರು.
 
 ಮಹಾನಗರ ಪಾಲಿಕೆ ವ್ಯಾಪ್ತಿಯ 08 ವಲಯಗಳಲ್ಲಿ ಸಂತಾನಹರಣ ಶಸ್ತ್ರ ಚಿಕಿತ್ಸೆ ಮತ್ತು ಆಂಟಿರೇಬೀಸ್ ಲಸಿಕಾ ಕರ‍್ಯಕ್ರಮದ ಯಶಸ್ವಿ ಅನುಷ್ಟಾನದ ಬಗ್ಗೆ ವಸ್ತುನಿಷ್ಠ ಮಾಹಿತಿಯನ್ನು ಪಡೆಯಲು ಹಾಗೂ ಬೀದಿನಾಯಿಗಳ ಹಾವಳಿ ಹಾಗೂ ಅವುಗಳ ನಿಯಂತ್ರಣಕ್ಕೆ ಸೂಕ್ತ ಯೋಜನೆಗಳನ್ನು ರೂಪಿಸಲು NAPRE ಶಿಫಾರಸ್ಸು ಮಾಡಿರುವ Sight–Resight ವಿಧಾನವನ್ನು ಅಳವಡಿಸಿಕೊಂಡು ಬೀದಿನಾಯಿಗಳ ಸಮೀಕ್ಷೆಯನ್ನು ದಿನಾಂಕ:11/07/2023 ರಿಂದ 02/08/2023ರವರೆಗೆ ಕೈಗೊಳ್ಳಲಾಗಿರುತ್ತದೆ.
 
ಈ ಬಾರಿ ಕೈಗೊಂಡಿರುವ ಸಮೀಕ್ಷೆಯಲ್ಲಿ ಪಾಲಿಕೆಯ 08 ವಲಯಗಳಲ್ಲಿ ಒಟ್ಟು 279335 ಬೀದಿನಾಯಿಗಳು ಕಂಡುಬಂದಿರುತ್ತದೆ. 2019 ನೇ ಸಾಲಿನ ಬೀದಿನಾಯಿಗಳ ಸಮೀಕ್ಷೆಯಲ್ಲಿ 3.10 ಲಕ್ಷ ಬೀದಿನಾಯಿಗಳು ಇರುವುದಾಗಿ ಮತ್ತು ಶೇಕಡ 51.16ರಷ್ಟು ಬೀದಿನಾಯಿಗಳಿಗೆ ಸಂತಾನಹರಣ ಶಸ್ತç ಚಿಕಿತ್ಸೆಯಾಗಿರುವುದಾಗಿ ಅಂದಾಜಿಸಲಾಗಿತ್ತು. ಹಾಲಿ ಕೈಗೊಂಡಿರುವ ಸಮೀಕ್ಷೆಯಲ್ಲಿ ಒಟ್ಟು ಶೇಕಡ 71.85 ರಷ್ಟು ಬೀದಿನಾಯಿಗಳಿಗೆ ಸಂತಾನಹರಣ ಶಸ್ತç ಚಿಕಿತ್ಸೆಯಾಗಿದ್ದು, ಒಟ್ಟಾರೆಯಾಗಿ ಶೇಕಡ 20 ರಷ್ಟು ಸಂತಾನಹರಣ ಶಸ್ತ್ರ ಚಿಕಿತ್ಸೆ ಪ್ರಮಾಣ ಹೆಚ್ಚಳವಾಗಿರುತ್ತದೆ ಹಾಗೂ ಬೀದಿನಾಯಿ ಮರಿಗಳ ಸಂಖ್ಯೆಯು ಕಡಿಮೆಯಾಗಿರುತ್ತದೆ. ಪ್ರಸ್ತುತ ಸಾಲಿನ ಸಮೀಕ್ಷೆಯ ವರದಿಯಂತೆ, ಬಿಬಿಎಂಪಿ ವ್ಯಾಪ್ತಿಯಲ್ಲಿ ಶೇಕಡ 10 ರಷ್ಟು ಬೀದಿನಾಯಿಗಳ ಸಂಖ್ಯೆ ಕಡಿಮೆಯಾಗಿರುತ್ತದೆ.
 
ವಲಯವಾರು ಹಾಗೂ ಬೀದಿ ನಾಯಿಗಳ ಸಂಖ್ಯೆ
 
1. ಪೂರ್ವ 37685
2. ಪಶ್ಚಿಮ 22025
3. ದಕ್ಷಿಣ 23241
4. ದಾಸರಹಳ್ಳಿ 21221
5. ಆರ್.ಆರ್.ನಗರ 41266
6. ಬೊಮ್ಮನಹಳ್ಳಿ 39183
7. ಯಲಹಂಕ 36343
8. ಮಹದೇವಪುರ 58371

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ