ಬೀದರ್ ಲೋಕಸಭೆ ಕ್ಷೇತ್ರದಿಂದ ಅಜರುದ್ದೀನ್ ಹೊಸ ಇನ್ನಿಂಗ್ಸ್?

ಗುರುವಾರ, 6 ಫೆಬ್ರವರಿ 2014 (18:12 IST)
PR
PR
ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಅಜರುದ್ದೀನ್ ಬೀದರ್ ಲೋಕಸಭೆ ಕ್ಷೇತ್ರದಲ್ಲಿ ಕಣಕ್ಕಿಳಿಯಲಿದ್ದಾರೆ ಎಂಬ ವದಂತಿ ದಟ್ಟವಾಗಿ ಹರಡಿದೆ. ಅಜರುದ್ದೀನ್ ಉತ್ತರಪ್ರದೇಶದ ಮೊರಾದಾಬಾದ್ ಲೋಕಸಭೆ ಕ್ಷೇತ್ರದಿಂದ ಗೆದ್ದು ಸಂಸದರಾಗಿದ್ದರು. ಧರ್ಮಸಿಂಗ್ ಅವರಿಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಅವರು ಸ್ಪರ್ಧಿಸುವ ಸಾಧ್ಯತೆ ಇಲ್ಲದಿರುವುದರಿಂದ ಅಜರ್ ಅವರ ಸ್ಥಾನದಲ್ಲಿ ಕಣಕ್ಕಿಳಿಯುತ್ತಾರೆಂದು ಹೇಳಲಾಗುತ್ತಿದೆ.

ದೆಹಲಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿರುವ ಅಜರುದ್ದೀನ್ ಈ ಸಂಬಂಧ ಮಾತುಕತೆ ನಡೆಸಿದ್ದಾರೆ. ಬೆಳಿಗ್ಗೆ ನಡೆದ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಮಾತ್ರ ಬೀದರ್‌ನಿಂದ ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಹೆಸರು ಇನ್ನೂ ಉಳಿದಿದೆ.

ವೆಬ್ದುನಿಯಾವನ್ನು ಓದಿ