ಬೌರಿಂಗ್‌ ಆಸ್ಪತ್ರೆಯ ವೈದ್ಯನಿಗೆ ಬಿತ್ತು ಗೂಸಾ..!

ಗುರುವಾರ, 7 ನವೆಂಬರ್ 2013 (18:14 IST)
PR
PR
ಕಳೆದ ಐದು ದಿನಗಳ ಹಿಂದೆ ಶಿವಾಜಿನಗರ ನಿವಾಸಿ, 85 ವರ್ಷ ವಯಸ್ಸಿನ ಮಹಮದ್ ಅಬ್ದುಲ್ ಸಾಬ್ ಅನಾರೋಗ್ಯದ ಹಿನ್ನೆಲೆಯಲ್ಲಿ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಅವರು ಬದುಕುಳಿಯುವ ಸಂಭವವಿಲ್ಲ ಎಂದು ವೈದ್ಯರು ಮೊದಲೇ ಹೇಳಿ, ತಮ್ಮ ಕೈಲಾದ ಪ್ರಯತ್ನವನ್ನು ಮಾಡಿದ್ರು. ಆದ್ರೆ ಅಬ್ದುಲ್ ಸಾಬ್ ಕೊನೆಗೂ ಬದುಕುಳಿಯಲಿಲ್ಲ. ಹೀಗಾಗಿ ಆಕ್ರೋಶಗೊಂಡ ಸಂಬಂಧಿಕರು ಡಾ. ಸತೀಶ್ ಮೇಲೆ ಹಿಗ್ಗಾಮುಗ್ಗ ಹಲ್ಲೆ ನಡೆಸಿದ್ದಾರೆ. ಅಷ್ಟೇ ಅಲ್ಲ, ಅವಾಚ್ಯ ಪದಗಳಿಂದ ನಿಂದಿಸಿ ರಾಡ್‌ನಿಂದ ಹಲ್ಲೆ ಮಾಡಲು ಯತ್ನಿಸಿದ್ದಾರೆ.

ಹೀಗಾಗಿ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯರಿಗೆ ಸೂಕ್ತ ಭದ್ರತೆ ನೀಡಬೇಕು ಎಂದು ಆಗ್ರಹಿಸಿ ಬೌರಿಂಗ್ ಆಸ್ಪತ್ರೆಯ ವೈದ್ಯರು ಆಸ್ಪತ್ರೆ ಆವರಣದಲ್ಲಿ ಮೌನ ಪ್ರತಿಭಟನೆ ನಡೆಸಿದರು. 'ಸಜಹ ಸಾವು ಪ್ರಕರಣಗಳಲ್ಲೂ ವೈದ್ಯರ ಮೇಲೆ ದೌರ್ಜನ್ಯ ನಡೆಯುತ್ತಿದೆ. ಇದರಿಂದ ತುರ್ತು ಸಂದರ್ಭಗಳಲ್ಲಿ ವೈದ್ಯರು ಚಿಕಿತ್ಸೆ ನೀಡಲಾಗದ ಸ್ಥಿತಿ ನಿರ್ಮಾಣವಾಗಿದೆ. ವೈದ್ಯರಿಗೆ ಭದ್ರತೆ ಒದಗಿಸಬೇಕು. ಜತೆಗೆ ಹಲ್ಲೆ ಮಾಡಿದವರ ವಿರುದ್ಧ ಕ್ರಮ ಜರುಗಿಸಬೇಕು,'' ಎಂದು ವೈದ್ಯರು ಆಗ್ರಹಿಸಿದರು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಪುಲಿಕೇಶಿನಗರ ವಿಭಾಗದ ಎಸಿಪಿ, ವೈದ್ಯರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಭರವಸೆ ನೀಡಿದರು. ವೈದ್ಯರ ಕರ್ತವ್ಯ ನಿರ್ವಹಿಸುವ ವೇಳೆ ಭದ್ರತೆ ಒದಗಿಸುವುದಾಗಿ ವೈದ್ಯಕೀಯ ಅಧೀಕ್ಷಕರು ಭರವಸೆ ನೀಡಿದ ಹಿನ್ನೆಲೆಯಲ್ಲಿ ವೈದ್ಯರು ಮುಷ್ಕರ ಕೈ ಬಿಟ್ಟರು.

ವೆಬ್ದುನಿಯಾವನ್ನು ಓದಿ