ಭೂಮಿ ಒತ್ತುವರಿ: ಕುಮಾರಸ್ವಾಮಿ ಸಮ್ಮುಖದಲ್ಲೇ ಜೆಡಿಎಸ್-ಕಾಂಗ್ರೆಸ್ ಫೈಟಿಂಗ್

ಸೋಮವಾರ, 10 ಫೆಬ್ರವರಿ 2014 (13:02 IST)
PR
ಜೆಡಿಎಸ್ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದ ಹಿನ್ನಲೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಇಂದು ಬೆಳಿಗ್ಗೆ ಘರ್ಷಣೆ ನಡೆದಿದೆ.

ಭೂಮಿ ಒತ್ತುವರಿ ತೆರವು ವಿರೋಧಿಸಿ ಮೂಡಿಗೆರಿ ತಾಲೂಕು ಬಲಿಗೆ ಎಂಬ ಗ್ರಾಮದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಸಿಎಂ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದ ಹಿನ್ನಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದರು.

ಆದರೆ, ಜೆಡಿಎಸ್ ಕಾರ್ಯಕರ್ತರು ತಮ್ಮ ಘೋಷಣೆ ಮುಂದುವರೆಸಿದ ಹಿನ್ನಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿರೋಧಿಸಿದ್ದಾರೆ. ಈ ವೇಳೆ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಹೊಡೆದಾಟ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮಾತನಾಡಿ, ಇದು ಯಾವುದೇ ಪಕ್ಷದ ವೈಯಕ್ತಿಕ ವಿಚಾರವಲ್ಲ. ಇದು ಕಷ್ಟಪಡುತ್ತಿರುವ ರೈತರ ವಿಚಾರವಾಗಿದೆ. ಅಧಿಕಾರಗಳ ನಿರ್ಲಕ್ಷವೇ ಇಷ್ಟೆಲ್ಲಾ ಸಮಸ್ಯೆಗೆ ಕಾರಣ ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ಚಿಕ್ಕಮಗಳೂರು ಶಾಸಕ ಸಿ.ಟಿ ರವಿ ಮಧ್ಯಪ್ರವೇಶಿಸಿದ್ದಾರೆ. ಇದಕ್ಕೆ ಆಕ್ರೋಶಗೊಂಡ ಪ್ರತಿಭಟನಕಾರರು ಸಿ.ಟಿ ರವಿ ವಿರುದ್ಧ ಗುಡುಗಿದ್ದಾರೆ. ಆಡಳಿತದಲ್ಲಿದ್ದಾಗ ಏನು ಮಾಡಿಲ್ಲ, ಈಗ ಇಲ್ಲಿಗೇಕೆ ಬಂದಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವೆಬ್ದುನಿಯಾವನ್ನು ಓದಿ