ಮದನಿಗೆ ಸರ್ಕಾರಿ ವೆಚ್ಚದಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ : ಸುಪ್ರೀಂ ಆದೇಶ

ಸೋಮವಾರ, 18 ನವೆಂಬರ್ 2013 (13:53 IST)
PTI
PTI
ಬೆಂಗಳೂರು ಸರಣಿ ಬಾಂಬ್‌ ಸ್ಪೋಟದ ಪ್ರಮುಖ ಆರೋಪಿಯಾಗಿರುವ ಅಬ್ದುಲ್ ನಾಸಿರ್ ಮದನಿಗೆ ಸರ್ಕಾರಿ ಆಸ್ಪತ್ರೆಯ ಬದಲು ಉತ್ಕೃಷ್ಟ ದರ್ಜೆಯ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ. ಸರ್ಕಾರಿ ವೆಚ್ಚದಲ್ಲಿ ಮದನಿಗೆ ಸಂಪೂರ್ಣ ಚಿಕಿತ್ಸೆಯನ್ನ ನೀಡಿ ಎಂದು ಸರ್ವೋಚ್ಛ ನ್ಯಾಯಾಲಯ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.

ಆರೋಪಿ ಪರ ವಕೀಲ ಪ್ರಶಾಂತ್‌ ಭೂಷಣ್ ಅವರು ಸಲ್ಲಿಸಿದ ಮನವಿಯ ಮೇರೆಗೆ ಸುಪ್ರೀಂ ಕೋರ್ಟ್‌ ಈ ಸೂಚನೆಯನ್ನು ನೀಡಿದೆ. ಮದನಿಗೆ ಶುಗರ್‌ ಇದೆ. ಜೊತೆಗೆ ಕಣ್ಣಿನ ಸಮಸ್ಯೆ ಕೂಡ ಇದೆ. ಕಣ್ಣಿನ ದೋಷವನ್ನು ದೂರ ಮಾಡಬೇಕು ಎಂದರೆ, ಶಸ್ತ್ರ ಚಿಕಿತ್ಸೆ ಮಾಡಬೇಕಾಗಿದೆ. ಹೀಗಾಗಿ ಮದನಿಗೆ ಸರ್ಕಾರಿ ವೆಚ್ಚದಲ್ಲಿ, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಬೇಕು ಎಂದು ಆರೋಪಿ ಪರ ವಕೀಲರು ನ್ಯಾಯಾಲಯದಲ್ಲಿ ಕೇಳಿಕೊಂಡಿದ್ದರು.

ಅರ್ಜಿ ಪರಿಶೀಲಿಸಿದ ಸರ್ವೋಚ್ಛ ನ್ಯಾಯಾಲಯ "ಮದನಿಗಾಗಿ ವಿಶೇಷ ಪೋಲೀಸ್‌ ಭದ್ರತೆಯುಳ್ಳ ವಾರ್ಡ್ ರಚನೆ ಮಾಡಿ. ಅಲ್ಲಿ ಮದನಿಗೆ ಸೂಕ್ತ ಚಿಕಿತ್ಸೆಯನ್ನು ರಾಜ್ಯ ಸರ್ಕಾರವೇ ನೀಡಬೇಕು ಜೊತೆಗೆ ಅದಕ್ಕೆ ತಗುಲುವ ಎಲ್ಲಾ ವೆಚ್ಚವನ್ನು ರಾಜ್ಯ ಸರ್ಕಾರವೇ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

ಮದನಿಗೆ ಈಗಾಗಲೇ 51 ಕ್ಕೂ ಹೆಚ್ಚು ಬಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಇನ್ನಷ್ಟು ಮಾಹಿತಿ ಮುಂದಿನ ಪುಟದಲ್ಲಿ...

PR
PTI
ಮದನಿಗೆ ಈಗಾಗಲೇ 51 ಕ್ಕೂ ಹೆಚ್ಚು ಬಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಹೀಗಾಗಿ ಖಾಸಗಿ ಆಸ್ಪತ್ರೆಯ ವೆಚ್ಚ ಅತ್ಯಂತ ದುಬಾರಿಯಾಗಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವುದಾದರೆ, ಆ ಚಿಕಿತ್ಸೆ ವೆಚ್ಚ ಭರಿಸುತ್ತೇವೆ ಎಂದು ಸರ್ಕಾರ ಹೇಳಿತ್ತು. ಆದ್ರೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಮದನಿ ನಿರಾಕರಿಸಿದ್ದಾನೆ.

ಮಣಿಪಾಲ ಆಸ್ಪತ್ರೆಯಲ್ಲಿ ಮದನಿಗೆ ಚಿಕಿತ್ಸೆ ಕೊಡಿಸಿ ನಂತರ ಶುಗರ್‌ ಕಂಟ್ರೋಲ್‌ ಮಾಡಿ ಅಗರ್‌ವಾಲ್‌ ಆಸ್ಪತ್ರೆಯಲ್ಲಿ ಕಣ್ಣಿನ ಚಿಕಿತ್ಸೆ ಮಾಡಿಸಿ ಎಂದು ಸುಪ್ರೀಂ ಸೂಚನೆ ನೀಡಿದೆ.

ವೆಬ್ದುನಿಯಾವನ್ನು ಓದಿ