ಮಹದೇವಪುರದಲ್ಲಿ ಬಿಜೆಪಿ -ಕಾಂಗ್ರೆಸ್ ಕಾರ್ಯಕರ್ತರ ಮಾರಾಮಾರಿ

ಗುರುವಾರ, 17 ಏಪ್ರಿಲ್ 2014 (15:35 IST)
PR
ಲೋಕಸಭೆ ಚುನಾವಣೆಯ ಶೇಕಡಾವಾರು ಪ್ರಮಾಣ ಕುರಿತಂತೆ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ವಾಗ್ವಾದ ಮಾರಾಮಾರಿಗೆ ತಲುಪಿ ಹಲವರಿಗೆ ಗಾಯಗಳಾಗಿವೆ ಎಂದು ಮೂಲಗಳು ತಿಳಿಸಿವೆ.

ಕುಂದಗೊಳ ಗ್ರಾಮದ ಮತಗಟ್ಟೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ನಡೆದ ವಾಗ್ವಾದ ಹಿಂಸಾಚಾರಕ್ಕೆ ತಿರುಗಿದಾಗ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ ಎನ್ನಲಾಗಿದೆ.

ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಾರಾಮಾರಿಯಿಂದ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ಉಂಟಾಗಿದ್ದು, ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ