ರಾಜ್ಯದಲ್ಲಿರುವ ವಿದೇಶಿ ವಿದ್ಯಾರ್ಥಿಗಳ ಮಾಹಿತಿ ಸಂಗ್ರಹ

ಮಂಗಳವಾರ, 16 ಡಿಸೆಂಬರ್ 2008 (15:28 IST)
ಮುಂಬೈ ದಾಳಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿರುವ ವಿದೇಶಿ ವಿದ್ಯಾರ್ಥಿಗಳ ಕುರಿತು ಶಾಲಾ, ಕಾಲೇಜುಗಳಲ್ಲಿ ಮಾಹಿತಿ ಸಂಗ್ರಹಿಸಿ ಪರೀಶೀಲನೆ ನಡೆಸಲಾಗುವುದು ಎಂದು ನಗರ ಪೊಲೀಸ್ ಆಯಕ್ತ ಶಂಕರ ಬಿದರಿ ತಿಳಿಸಿದ್ದಾರೆ.

.ಮುಂದಿನ ದಿನಗಳಲ್ಲಿ ಇಂತಹ ಅನಾಹುತಗಳು ಸಂಭವಿಸದಂತೆ ಎಚ್ಚರಿಕೆ ವಹಿಸಿರುವ ಇಲಾಖೆ ಹಲವು ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ ಎಂದು ಅವರು ತಿಳಿಸಿದ್ದಾರೆ.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫೆಬ್ರವರಿ 2ರಿಂದ ಎಲ್ಲಾ ಹೊಟೇಲ್, ಅಪಾರ್‌ಟ್ಮೆಂಟ್, ಬಾಡಿಗೆ ಮನೆಗಳಲ್ಲಿ ವಾಸವಾಗಿರುವ ಕುರಿತು ಮಾಹಿತಿ ಪಡೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಅಲ್ಲದೆ, ಪರೀಶೀಲನೆ ಕಾರ್ಯವನ್ನು ವರ್ಷದಲ್ಲಿ ನಾಲ್ಕು ಬಾರಿ ಮಾಡುವ ಮೂಲಕ ರಾಜ್ಯದಲ್ಲಿ ಉಗ್ರರನ್ನು ಮಟ್ಟಹಾಕಲು ಸಹಕಾರಿಯಾಗುತ್ತದೆ ಎಂಬ ಅಭಿಪ್ರಾಯವನ್ನು ಅವರು ವ್ಯಕ್ತಪಡಿಸಿದರು.

ಈ ನಡುವೆ, ರಾಜ್ಯದ ಸುಮಾರು 450 ಪೊಲೀಸರಿಗೆ ಶೀಘ್ರದಲ್ಲಿ ಕಮಾಂಡೊ ತರಬೇತಿ ನೀಡಲಾಗುವುದು ಮತ್ತು ಇದು ರಾಜ್ಯಕ್ಕೆ ಉಪಯುಕ್ತವಾಗಲಿದೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

ವೆಬ್ದುನಿಯಾವನ್ನು ಓದಿ